ಅರಬೈಲ್ ಘಟ್ಟದ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿ ಸವಣೂರಿನ10 ಜನರ ಸಾವು.

 ವಾರದ ಸಂತೆಗೆ ವ್ಯಾಪಾರಕ್ಕೆ ಹೊರಟವರು ಬಾರದ ಲೋಕಕ್ಕೆ. ಮಂಜು ಮುಸುಕಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ.

ಯಲ್ಲಾಪುರ 22 : ಹಾವೇರಿ ಜಿಲ್ಲೆಯ ಸವಣೂರಿನಿಂದ ಯಲ್ಲಾಪುರ ಮಾರ್ಗವಾಗಿ ಕುಮಟಾಕ್ಕೆ ಹೊರಟಿದ್ದ ತರಕಾರಿ ತುಂಬಿದ್ದ ಲಾರಿ ಇಂದು ಬೆಳಗಿನ ಜಾವ ಅರಬೈಲ ಘಟ್ಟದ ಸಮೀಪದ ಗುಳ್ಳಾಪುರ ಬಳಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಪಲ್ಟಿಯಾಗಿ, ಅದರಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಈ ಅವಘಡ ಸಂಭವಿಸಿದ್ದು 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕುಮಟಾದಲ್ಲಿ ನಡೆಯುತ್ತಿದ್ದ ವಾರದ ಸಂತೆಗೆ ಎಲ್ಲರೂ ತರಕಾರಿ ಸಾಗಿಸುತ್ತಿದ್ದು, ಬೆಳಗಿನ ಜಾವ ರಸ್ತೆಯಲ್ಲಿ ಮಂಜು ಮುಸುಕಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ಶವಗಳನ್ನು ಹೊರತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್‌ಪಿ ನಾರಾಯಣ್ ಸ್ಥಳಕ್ಕೆ
ಭೇಟಿ ನೀಡಿ ನೀಡಿದ್ದಾರೆ.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!