ಧಾರವಾಡ : ಕನಾರ್ಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ 03 ವರ್ಷಗಳ ಅವಧಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡದಲ್ಲಿ ಪ್ಯಾನಲ್ ವಕೀಲರನ್ನು ನೇಮಿಸಲು ನಿರ್ದೇಶಿಸಲಾಗಿದೆ. ಜೂನ್ 30, 2025 ರಂದು 3 ವರ್ಷಗಳ ಸೇವಾ ಅವಧಿ ಪೂರ್ಣಗೊಳ್ಳುತ್ತಿದ್ದು ಆ ಕಾರಣ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹೊಸದಾಗಿ ಪ್ಯಾನಲ್ ವಕೀಲರ ನೇಮಕಾತಿಗೆ ಅರ್ಜಿ ಆಹ್ವಾನ

ಆಸಕ್ತ ನ್ಯಾಯವಾದಿಗಳು ನಿಗದಿತ ಅರ್ಜಿ ನಮೂನೆಯನ್ನು ಮೇ 02, 2025 ಸಾಯಂಕಾಲ 5 ಗಂಟೆಯೊಳಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಛೇರಿಯಲ್ಲಿ ಅರ್ಜಿ ಸಲ್ಲಿಸಬೇಕೆಂದು ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ. ರಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.