ಧಾರವಾಡ 15 : ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷ ಎಸ್. ಆರ್. ಪಾಟೀಲ ಹಾಗೂ ಬೆಳಗಾವಿ ಕಂದಾಯ ವಿಭಾಗದ ಉಸ್ತುವಾರಿಗಳವರ ಅಧ್ಯಕ್ಷತೆಯಲ್ಲಿ ಜೂನ್ 18, 2025 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಲ್ಲ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.