ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮತ್ತು ಫಲ-ಪುಷ್ಪ ಪ್ರದರ್ಶನ ಸಮಿತಿ, ಜಿಲ್ಲಾ ಹಾಪ್ ಕಾಮ್ಸ್, ಮೀನುಗಾರಿಕೆ ಇಲಾಖೆ, ಎನ್ಆರ್ಎಲ್ಎಮ್ (ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ) ಅವರ ಸಹಯೋಗದೊಂದಿಗೆ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನವನ್ನು ಹಾಗೂ ಸಿರಿಧಾನ್ಯ ಹಬ್ಬವನ್ನು ಡಿಸೆಂಬರ್ 13, 2025 ರಿಂದ ಡಿಸೆಂಬರ್ 15, 2025 ರವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಆವರಣದಲ್ಲಿ ಆಯೋಜಿಸಲಾಗಿದೆ.
ಸದರಿ ಫಲ-ಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬದಲ್ಲಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಘ ಸಂಸ್ಥೆಗಳು, ರೈತರು ಮತ್ತು ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳು, ಹೂಗಳು ಮತ್ತು ಅಲಂಕಾರಿಕ ಗಿಡಗಳ ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0836-2957801 ಗೆ ಅಥವಾ ಧಾರವಾಡ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಅಥವಾ ಹುಬ್ಬಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಲ್ಲಾಪಂಚಾಯತ) ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕ ಕಾಶೀನಾಥ ಭದ್ರನ್ನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.