• 24 ತಾಸು ನಿರಂತರ ವಿದ್ಯುತ್ ಸರಬರಾಜಿಗೆ ರೈತರ ಆಗ್ರಹ
    ಧಾರವಾಡ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕೇವಲ 7 ಗಂಟೆಗಳ ಕಾಲ ಮಾತ್ರ ವಿದ್ಯುತ್ ನೀಡಲಾಗುತ್ತಿದ್ದು, ಇದು ಜಮೀನುಗಳಿಗೆ ನೀರು ಹರಿಸಲು ತೀರಾ ಅಪರ್ಯಾಪ್ತವಾಗಿದೆ ಅಲ್ಲದೇ ಒಣಗುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳಲು ಕನಿಷ್ಠ ಒಂದು ತಿಂಗಳ ಕಾಲ 24 ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕಿನ ಛಬ್ಬಿ ಹೋಬಳಿಯ ರೈತರು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟಿಸಿದರು