ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ  ನಡೆಯಿತು.
ದಾವಣಗೆರೆಯ ವಿಕಲಚೇತನರ ಸಂಯುಕ್ತ ಪ್ರಾದೇಶಿಕ ಕೇಂದ್ರದ ಭೌತಚಿಕಿತ್ಸಕರಾದ ಡಾ. ಇ. ತಾಮರೈ ಸೆಲ್ವನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪದ್ಮಲತಾ ನಿರಂಜನ್ ಗೌರವ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಪ ಕುಲಸಚಿವರಾದ ಪ್ರೊ. ಕ್ಲೆಮೆಂಟ್ ಚೆಲ್ಲಿ, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗ್ಡೆ, ವಾಕ್ ಮತ್ತು ಶ್ರವಣ ವಿಭಾಗದ ಮುಖ್ಯಸ್ಥ ಹಾಗೂ ಕಾರ್ಯಾಗಾರದ ಸಂಘಟನಾ ಅಧ್ಯಕ್ಷರಾದ ಡಾ. ವಸೀಮ್ ಅಹ್ಮದ್, ಸಂಘಟನಾ ಕಾರ್ಯದರ್ಶಿ ಅರುಣಾ ಪ್ರಭು ಮತ್ತು ಸಿಂಪಿ ಶ್ವೇತಾ, ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕರ್ನಾಟಕದಾದ್ಯಂತ ವಾಕ್ ಮತ್ತು ಶ್ರವಣ ಕ್ಷೇತ್ರದ ಸುಮಾರು ೫೦ ನುರಿತ ಬೋಧಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಶರತ್ ಕುಮಾರ್ ಸ್ವಾಗತಿಸಿದರು. ಶ್ರೀಗೌರಿ ಮತ್ತು ಕಾರ್ತಿಕ್ ನಿರೂಪಿಸಿದರು. ಯಶು ಗೌಡ ವಂದಿಸಿದರು.