ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ 19 ಆರೋಪಿ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಬಂಧನಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ಸದ್ಯ ಬೆಳಗಾವಿಯ ಪೊಲೀಸ್ ಆಯುಕ್ತರ ಕಚೇರಿಯ ಅಪರಾಧ ವಿಭಾಗದ ವಿಶೇಷ ತಂಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಈ ಹಿಂದೆ ಅಂದರೆ 2016ರ ಜೂನ್ 15 ರಂದು ಧಾರವಾಡದ ಉಪನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಆಗಿದ್ದರು. ಈ ಪ್ರಕರಣದ ಎ 19 ಆರೋಪಿಯಾಗಿರುವ ಚೆನ್ನಕೇಶವ ಟಿಂಗರಿಕರ್ ಈ ಹಿಂದೆ ಅ. 31ರಿಂದ ಬಂದೋಬಸ್ತ್ ಹಿನ್ನೆಲೆಯಲ್ಲಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಆಗ ಕೂಡ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.
ಅಲ್ಲದೆ, ಮುಂದಿನ ದಿನಾಂಕದಂದು 5-11-24 ರಂದು ಕಡ್ಡಾಯವಾಗಿ ಹಾಜರಾಗಲು ಸೂಚನೆ ನೀಡಿತ್ತು. ಇದೀಗ ಮತ್ತೇ ಬೆಳಗಾವಿಯಅಧಿವೇಶನ ಬಂದೋಬಸ್ತ್ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ಮತ್ತೇ ಸತತ ಗೈರು ಹಾಜರಾದ ಹಿನ್ನಲೆಯಲ್ಲಿ ಬಂಧಿಸಿ, ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಸಿಬಿಐ ಅಧಿಕಾರಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.
ಚೆನ್ನಕೇಶವ ಟಿಂಗರಿಕರ್ ಮೇಲಿನ ಆರೋಪವೇನು ?
ಈ ಹಿಂದೆ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಆಗಿ ಚನ್ನಕೇಶವ ಟಿಂಗರೀಕರ ಕಾರ್ಯನಿರ್ವಹಿಸಿದ್ದ ವೇಳೆಯೇ ಅವರ ಠಾಣೆಯ ವ್ಯಾಪ್ತಿಯಲ್ಲಿ ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣ 2016ರ ಜೂನ್ 15ರಂದು ಸಪ್ತಾಪುರದ ಉದಯ್ ಜಿಮ್ ನಲ್ಲಿ ಬೆಳ್ಳಂ ಬೆಳಗ್ಗೆ ನಡೆದಿತ್ತು.ಈ ಸಂದರ್ಭದಲ್ಲಿ ಯೋಗೀಶ ಗೌಡ ಹತ್ಯೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದ ಆರೋಪ ಇವರ ಮೇಲಿದ್ದು, ಸಿಬಿಐ ಇವರನ್ನು ಈ ಪ್ರಕರಣದಲ್ಲಿ ಎ19 ಎಂದು ಘೋಷಿಸಿದೆ.
ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ಎ1 ಆರೋಪಿಯಾಗಿರುವ ಬಸವರಾಜ ಮುತ್ತಗಿಯಿಂದ 5 ಲಕ್ಷ ರೂಪಾಯಿ ಪಡೆದ ಆರೋಪದ ಕುರಿತು ಸಿಬಿಐ ಅಧಿಕಾರಿ ರಾಕೇಶ್ ರಂಜನ್ ಅವರು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ, ಪ್ರಕರಣದ ಮಾಫಿ ಸಾಕ್ಷಿಯಾಗಲು ಸಮ್ಮತಿ ಸೂಚಿಸಿರುವ ಬಸವರಾಜ ಮುತ್ತಗಿ ಕೂಡ ಇದನ್ನು ತಮ್ಮ ಹೇಳಿಕೆಯಲ್ಲಿ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಪ್ರಕರಣವನ್ನು ಮುಚ್ಚಿ ಹಾಕಲು ಹಂತಕರ ಜೊತೆ
ಕೈಜೋಡಿಸಿದ್ದ ಆರೋಪ ಕೇಳಿಬಂದಿದ್ದು ಯೋಗೀಶ ಗೌಡ ಕೊಲೆ ನಡೆದಾಗ ಅಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಪ್ರಕರಣದ ಎ15 ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅಣತಿಯಂತೆ ಕೆಲಸ ಮಾಡಿದ್ದರು ಎಂದು ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಬಗ್ಗೆ ಬಲ್ಲ ಮೂಲಗಳಿಂದ ಮಾಹಿತಿಯು ಬಂದಿದ್ದು. ಎನಾಗುತ್ತದೆ ಎಂದು ಸಾಯಂಕಾಲದವರೆಗೆ ಕಾದುನೋಡಬೆಕಾಗಿದೆ.