ಹುಬ್ಬಳ್ಳಿ : ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದ್ರಕಲಾ ಟಾಕೀಸ್ ಹತ್ತಿರದ ಚಿಕನ್ ಪೌಲ್ಟ್ರಿ ಅಂಗಡಿಗೆ ನುಗ್ಗಿ ಅಂಗಡಿಯಲ್ಲಿದ್ದ ದೂರುದಾರರಿಗೆ ಚಾಕು ತೋರಿಸಿ ಹೆದರಿಸಿ ಅವರ ಬಳಿ ಇದ್ದ 5000/- ನಗದು ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದರ ಬಗ್ಗೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿತ್ತು, ಸದರಿ ತಂಡವು ಆರೋಪಿಗಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಆರೋಪಿತರಾದ ಮೊಹಮ್ಮದ್ ಫಹದ್ ಮಿಠಾಯಿಗಾರ್ ಅಯ್ಯು ಬೇಪಾರಿ, ಖಾಜಾ ಭಾಷಾ ಮುಲ್ಲಾ, ಶಿವಾಜಿ ಮದ್ರಾಸಿ, ಮುಬಾರಕ್ ಮಂಚಿನಕೊಪ್ಪ ಅಬ್ಬು ಮನಿಯಾರ್ ಎಂಬ ಆರು ಜನ ಆರೋಪಿತರನ್ನು ಬಂಧಿಸಿದ್ದು, ಬಂಧಿತರಿಂದ ಕೃತಕ್ಕೆ ಬಳಸಿದ್ದ ಎರಡು ದ್ವಿಚಕ್ರ ವಾಹನ ಹಾಗೂ ಒಂದು ಚಾಕು,ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ ಎಂದು ಪೋಲೀಸ ಆಯುಕ್ತ ಶಶಿಕುಮಾರ ಎನ್ ಹೇಳಿದರು.