ಧಾರವಾಡ : ನಗರದ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಗಸ್ತು ತಿರುಗಿದ್ದಾರೆ.
ಸಾರ್ವಜನಿಕರು ಪೊಲೀಸರೊಂದಿಗೆ ಸ್ನೇಹದಿಂದಿರಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು . ಸಾರ್ವಜನಿಕರು ಪೊಲೀಸರೊಂದಿಗೆ ಬಾಂಧವ್ಯದಿಂದ ಇರಬೇಕು ಎಂಬ ಉದ್ದೇಶದಿಂದ ಧಾರವಾಡದ ಅನೇಕ ಪ್ರದೇಶಗಳಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಸಂಚರಿಸಿ ಗಮನಸೆಳೆದರು .
ಅಷ್ಟೇ ಅಲ್ಲದೇ ಸಾರ್ವಜನಿಕರ ಸಮಸ್ಯೆ ಏನು ಎಂಬುದರ ಕುರಿತು ಅನೇಕ ಕಡೆ ಸಾರ್ವಜನಿಕರ ಅಹವಾಲನ್ನೂ ಅವರು ಸ್ವೀಕರಿಸಿದರು . ಪೊಲೀಸ್ ಆಯುಕ್ತರಿಗೆ ಡಿಸಿಪಿ ಮಹಾಲಿಂಗ ನಂದಗಾವಿ , ಎಸಿಪಿ ಪ್ರಶಾಂತ ಸಿದ್ದನಗೌಡರ , ಇನ್ಸ್ಪೆಕ್ಟರ್ಗಳಾದ ಪ್ರಭು ಗಂಗೇನಹಳ್ಳಿ , ಸಂಗಮೇಶ ದಿಡಿಗನಾಳ , ಕಾಡದೇವರಮಠ ಸೇರಿದಂತೆ ಅನೇಕರು ಸಾಥ್ ನೀಡಿದರು .