ಭಗವಧ್ಗೀತೆಯಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿ – ಶಶಿಧರ ನರೇಂದ್ರ

ಧಾರವಾಡ : ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯ ಮತ್ತು ಸಂಸ್ಕಾರ ನೀಡುವಲ್ಲಿ ಭಗವದ್ಗೀತೆ ಪಾತ್ರ ಬಹಳ ಇದೆ.‌ ಇಂದಿನ ಯುವ ಸಮುದಾಯ ಭಗವದ್ಗೀತೆಯನ್ನು ಓದಬೇಕು, ಭಗವಧ್ಗೀತೆಯಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿ ಎಂದು ಎಂದು ನಿವೃತ್ತ ಆಕಾಶವಾಣಿ ಉದ್ಘೋಷಕರು ಡಾ. ಶಶಿಧರನರೇಂದ್ರ ಹೇಳಿದರು.

ಅವರು ಕರ್ನಾಟಕ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಂಸ್ಕೃತ, ಪ್ರಾಕೃತ ಹಾಗೂ ಯೋಗ ವಿಭಾಗವು ಸೋಮವಾರ ಆಯೋಜಿಸಿದ ಗೀತಾ ಜಯಂತಿ ಆಚರಣೆ ಹಾಗೂ ವಿಶೇಷ ವಿಕನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಅತ್ಯಂತ ಅವಶ್ಯವಾದ ಯುಕ್ತಿ-ಭಕ್ತಿ ಹಾಗೂ ಶಕ್ತಿ ಇವುಗಳನ್ನು ಹೇಗೆ ರೂಪಿಸಿಕೊಳ್ಳಬೇಕೆಂಬುದನ್ನು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾನೆ ಎಂದು ಉಲ್ಲೇಖಿಸಿದ ಅವರು ಭಗವದ್ಗೀತೆಯು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣ ಮಾಡುವಲ್ಲಿ ಅತ್ಯಂತ ಮಹತ್ವಪೂರ್ಣ ಪಾತ್ರವನ್ನು ವಹಿಸಿದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಸದ್ಬಳಕೆ ಮಾಡಿಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳು ಭಗವದ್ಗೀತೆಯನ್ನು ಅವಶ್ಯವಾಗಿ ಓದಬೇಕು ಹಾಗೂ ವ್ಯಕ್ತಿತ್ವ ನಿರ್ಮಾಣಕ್ಕೆ ಭಗವದ್ಗೀತೆಯ ನೀಡಿದ ಸಂದೇಶವನ್ನು ಪಾಲಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಡಿ.ಬಿ. ಕರಡೋಣಿ ಮಾತನಾಡಿ ಭಗವದ್ಗೀತೆಯು ಯಾವುದೇ ಒಂದು ಜಾತಿ ಮತ ಹಾಗೂ ಪಂತಕ್ಕೆ ಮಾತ್ರ ಸೀಮಿತವಾಗದೆ ಇಡೀ ಮಾನವ ಕುಲಕ್ಕೆ ಶ್ರೇಷ್ಠ ಸಂದೇಶ ನೀಡಿದೆ ಎಂದರು.

ವಿಭಾಗದ ಮುಖ್ಯಸ್ಥೆ ಡಾ. ರಜನೀ.ಎಚ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ. ಜ್ಯೋತಿ ಗೋಕಾವಿ, ಡಾ.ಗೀತಾ ಕುಮಶೀಕರ್, ಡಾ. ಅಂಜನ ಮಠದ್, ಡಾ. ಅನ್ನಪೂರ್ಣ ಹೆಗಡೆ, ಗುರುಪ್ರಸಾದ್ ಹೆಗಡೆ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಡಾ. ಪ್ರಕಾಶ್ ಹೆಗಡೆ ಅತಿಥಿಗಳನ್ನು ಪರಿಚಯಿಸಿದರು. ಡಾ. ಚಂದ್ರು.ಆರ್ ಲಮಾಣಿ ವಂದಿಸಿದರು. ಶ್ರೀಗೌರಿ ಕಾರ್ಯಕ್ರಮ ನಿರೂಪಿಸಿದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!