ಲಕ್ಷ್ಮೀ ಹೆಬ್ಬಾಳ್ಕರ್‌ ಅಶ್ಲೀಲ್‌ ಪದದಿಂದ ನಿಂದನೆ : ಸಿ.ಟಿ.ರವಿ ಅರೆಸ್ಟ್‌

ಬೆಳಗಾವಿ ಡಿ.19 : ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಠಾಣೆ ಪೊಲೀಸರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಅವರ ದೂರಿನ ಮೇರೆಗೆ ಬಿಎನ್‌ಎಸ್ ಕಾಯ್ದೆ 75 ಮತ್ತು 79ರ ಅಡಿಯಲ್ಲಿಎಪ್‌ಐಆರ್ ಕೇಸು ದಾಖಲಿಸಿದ್ದು . ಲೈಂಗಿಕ ಕಿರುಕುಳ, ಮಹಿಳೆಯ ಇಚ್ಛೆಯ ವಿರುದ್ಧ ಅಶ್ಲೀಲತೆ ತೋರುವುದು, ಮಹಿಳೆಯರ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಟೀಕೆ ಎಂಬುದು ಸೇರಿ ಬಿಎನ್‌ಎಸ್ ಕಾಯ್ದೆಯಡಿ ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕೇಸ್ ದಾಖಲಾದ ಬೆನ್ನಲ್ಲೇ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಿ.ಟಿ. ರವಿ ಅವರನ್ನು ಪೊಲೀಸರು ಎತ್ತಿಕೊಂಡು ಹೋಗಿದ್ದಾರೆ.

ರವಿ ಅವರನ್ನು ಬಂಧಿಸಿ ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಗಿದೆ ಎಂಬ ಮಾಹಿತಿ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹರದಾಡುತ್ತಿದೆ.

  • Related Posts

    ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ

    ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ  ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…

    ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷರರ ಹುದ್ದೆಗೆ ಅರ್ಜಿ ಆಹ್ವಾನ

    ಧಾರವಾಡ ಡಿ.೨೧ :  2024-25 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ…

    RSS
    Follow by Email
    Telegram
    WhatsApp
    URL has been copied successfully!