ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಸಾಧನೆ ಮಾಡಿ – ಡಾ. ಡಿ. ವೀರೇಂದ್ರ ಹೆಗ್ಗಡೆ

ಧಾರವಾಡ 27 : ಇಂದಿನ ಕಂಪ್ಯೂಟರ್ ಯುಗದಲ್ಲಿ ಎಂ.ಸಿ.ಎ ಕಲಿತ ವಿದ್ಯಾರ್ಥಿಗಳಿಗೆ ಅತ್ಯಧಿಕ ಬೇಡಿಕೆ ಇದೆ. ಉದ್ಯೋಗಾಧಾರಿತ ಕೋರ್ಸು ಇದಾಗಿದ್ದು, ವಿದ್ಯಾರ್ಥಿಗಳು ಸತತ ಪ್ರಯತ್ನ, ಹೊಸ ವಿಚಾರಗಳ ಆವಿಷ್ಕಾರಗಳೊಂದಿಗೆ ತಮ್ಮ ಜಾಣ್ಮೆಯನ್ನು ತೋರಬೇಕಾದ ಅವಶ್ಯಕತೆ ಇದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯ ಸವಾಲನ್ನು ಸ್ವೀಕರಿಸಲೇಬೇಕು. ಸ್ಪರ್ಧೆಯಲ್ಲಿ ಉಳಿಯಬೇಕಾದರೆ ದಿನದಿಂದ ದಿನಕ್ಕೆ ಬದಲಾಗುತ್ತಿರುವ ತಾಂತ್ರಿಕತೆಯ ಮಾಹಿತಿ ಇರಬೇಕಾದದ್ದು ಅವಶ್ಯಕ ಎಂದು ಜೆೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಎಂ.ಸಿ.ಎ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜೆ.ಎಸ್.ಎಸ್ ನ ಕಾರ್ಯಾಧ್ಯಕ್ಷರು ಧರ್ಮಸ್ಥಳ ಧರ್ಮಾಧಿಕಾರಿಗಳು ಆದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡುತ್ತಿದ್ದರು.

ಜೆಎಸ್.ಎಸ್ ನ ಉತ್ತಮ ಕಲಿಕಾ ವಾತಾವರಣದಲ್ಲಿ ಈ ಸಂಸ್ಥೆ ಕಾರ್ಯಾರಂಭ ಮಾಡಿದೆ. ಜಗತ್ತೇ ಈಗ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ನತ್ತ ಮುಖ ಮಾಡಿದೆ. ಈ ಸಂದರ್ಭದಲ್ಲಿ ತಮ್ಮ ವ್ಯಾಸಂಗದ ಜೊತೆ ಈ ಕೋರ್ಸಿನ ಮಾಹಿತಿಯನ್ನು ಪಡೆದುಕೊಳ್ಳಿ ಇದರಿಂದ ಮುಂದೆ ತಮಗೆ ಒಳ್ಳೆಯ ಉನ್ನತ ಉದ್ಯೋಗಾವಕಾಶಗಳು ದೊರೆಯಲಿವೆ ಜೀವನದಲ್ಲಿ ಬರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಸಾಧನೆ ಮಾಡಿ ಎಂದು ಹಾರೈಸಿದರು.

ಎ.ಆಯ್.ಸಿ.ಟಿ ಅನುಮತಿಯೊಂದಿಗೆ ಈ ವರ್ಷ ಎಂ.ಸಿ.ಎ ಕೋರ್ಸನ್ನು ಆರಂಭಿಸಲಾಗಿದೆ. ನುರಿತ ಶಿಕ್ಷಕವರ್ಗ, ಅತ್ಯಾಧುನಿಕ ಕಂಪ್ಯೂಟರ್ ಲ್ಯಾಬ್‌ಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಈ ಪ್ರಥಮ ಬ್ಯಾಚಿನ ವಿದ್ಯಾರ್ಥಿಗಳಿಗೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ದೊರೆತಿದೆ. ಇದು ನಮ್ಮೆಲ್ಲರ ಸೌಭಾಗ್ಯವೇ ಸರಿ ಎಂದು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಅಭಿಪ್ರಾಯಪಟ್ಟರು.
ಎಂ.ಸಿ.ಎ ಕಾಲೇಜಿನ ನಿರ್ದೇಶಕರಾದ ಡಾ. ಸೂರಜ್ ಜೈನ್ ವಂದಿಸಿದರು.

ಇದೇ ಸಂದರ್ಭದಲ್ಲಿ ಎಂ.ಸಿ.ಎ ನ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!