ಧಾರವಾಡ ಜನೇವರಿ.01: ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ ಮುಖ್ಯ ಕಾನೂನು ನೆರವು ಅಭಿರಕ್ಷಕ (1), ಉಪ ಕಾನೂನು ನೆರವು ಅಭಿರಕ್ಷಕ (1), ಸಹಾಯಕ ಕಾನೂನು ನೆರವು ಅಭಿರಕ್ಷಕ (2) ಹುದ್ದೆಗಳಿಗೆ ಆಸಕ್ತ ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 10, 2025 ರೊಳಗಾಗಿ ಧಾರವಾಡ ಎಡಿಆರ್ ಕಟ್ಟಡ, ಸಿವಿಲ್ ನ್ಯಾಯಾಲಯ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು.
ಸಂಬಂಧಪಟ್ಟ ಮಾಹಿತಿ, ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ಅಂರ್ತಜಾಲದಲ್ಲಿ ಪ್ರಕಟಿಸಲಾಗಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಜಿ. ರಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.