ಧಾರವಾಡ : ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಎ ಐ ಕೆ ಕೆ ಎಂ ಎಸ್ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಧಾರವಾಡದ ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕೇಂದ್ರ ರಾಜ್ಯ ಸರ್ಕಾರಗಳ ರೈತ ವಿರೋಧಿ, ಕಾರ್ಪೊರೇಟ್ ಪರವಾದ ಕೃಷಿ ನೀತಿಗಳು ಹಿಂಪಡೆಯಲು, ಜಿಲ್ಲೆಯ ಎಲ್ಲಾ ಬಗರ್ ನೀಡಲು, ಮಳೆಯಿಂದ ಹಾನಿಯಾದ ಬೆಳೆ ನಷ್ಟ ಪರಿಹಾರ ನೀಡಬೇಕೆಂದು, ಜಿಲ್ಲೆಯಲ್ಲಿ ಹದಿಗೆಟ್ಟ ರಸ್ತೆಗಳನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿ ರೈತರ ಬೃಹತ್ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ, ಪ್ರಧಾನ ಮಂತ್ರಿಗಳಿಗೆ, ಮುಖ್ಯಮಂತ್ರಿಗಳಿಗೆ, ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ದೀಪಾ ಧಾರವಾಡ, ಜಿಲ್ಲಾ ಕಾರ್ಯ ಶರಣು ಗೋನವಾರ, ಜಿಲ್ಲಾ ಉಪಾಧ್ಯಕ್ಷ ಹನುಮೇಶ್ ಹುಡೇದ, ನಾರಾಯಣ ಮೇಗನಿ, ಅಲ್ಲಾವುದ್ದೀನ್ ಅಡಲಿ, ಶಿವಲಿಂಗಪ್ಪ ಉಣಕಲ್, ರೈತರು ಮುಂತಾದವರು ಇದ್ದರು.