ಧಾರವಾಡ : ಹಿರಿಯ ನಾಗರಿಕರ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ವಿಕಲಚೇತನರ ಕಾಯ್ದೆ 1995 ಹಾಗೂ ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆ 2007 ಅಡಿ ಇಲಾಖೆಯಲ್ಲಿ ನೋಂದಣಿ ಮಾಡಿಸದೆ ಸಂಸ್ಥೆಗಳನ್ನು ನಡೆಸುತ್ತಿದ್ದಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.