.ಧಾರವಾಡ : ಕೃಷಿ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕೃಷಿ ಮಹಾವಿದ್ಯಾಲಯ ಧಾರವಾಡ ವತಿಯಿಂದ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸ್ಹೇಹ ಸಮ್ಮಿಲನ ಕಾರ್ಯಕ್ರಮವನ್ನು ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಚಾಲನೆ ನೀಡಲಾಯಿತು.
ಉಪರಾಷ್ಟ್ರಪತಿಗಳಾದ ಜಗದೀಪ ಧನಕರ್ ಅವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.
ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್, ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಹಾಪೌರರಾದ ರಾಮಪ್ಪ ಬಡಿಗೇರ ಇನ್ನಿತರು ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಪಿ.ಎಲ್.ಪಾಟೀಲ ಭಾಗವಹಿಸಿದ್ದರು.