ಹುಬ್ಬಳ್ಳಿ: ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರೈತರ ಆದಾಯವನ್ನು ದ್ವಿಗುಣಗೊಳಿಸಲು ಅವರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೈಗಾರಿಕೆಗಳ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗಿದೆ, ದಿನದಿಂದ ದಿನಕ್ಕೆ ನಗರಗಳಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ ಇದನ್ನು ಗಮನದಲ್ಲಿಟ್ಟುಕೊಂಡು ಮೂಲಭೂತ ಸೌಕರ್ಯಗಳ ಒದಗಿಸುವಿಕೆ, ರೈಲ್ವೆ ಸಂಪರ್ಕ, ರಸ್ತೆಗಳ ನಿರ್ಮಾಣ ಇವುಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನಸಾಮಾನ್ಯರ ದೈನಂದಿನ ಜೀವನ ಸುಲಭವಾಗುವಂತೆ ಯೋಜನೆ ರೂಪಿಸಲಾಗಿದೆ ಎಂದು ಎಮ್.ಆರ್.ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.
ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2026 – 27 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಇದು ಅತ್ಯಂತ ಪ್ರಬುದ್ಧವಾದ ಬಜೆಟ್, ಇದನ್ನು ನಾನು ಅತ್ಯಂತ ಸಂತಸದಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ.
ದೇಶದ ಅಭಿವೃದ್ಧಿಯ ದೃಷ್ಟಿಕೋನ ಇದರಲ್ಲಿ ಕಂಡು ಬರುತ್ತದೆ, ಈ ಬಜೆಟ್ ಎಲ್ಲ ವಲಯಗಳನ್ನು ಒಳಗೊಂಡು ಒಂದು ಪರಿಪೂರ್ಣ ಬಜೆಟ್ ಆಗಿದೆ, ಬಜೆಟ್ ಹೀಗೆ ಇರಬೇಕು ಎಂಬುದಕ್ಕೆ ಇದು ಉದಾಹರಣೆಯಾಗಿದೆ. ಸಮಗ್ರ ಅಭಿವೃದ್ಧಿಯನ್ನು ಹೊಂದಿ, ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಕನಸನ್ನು ನನಸು ಮಾಡುವ ಬಜೆಟ್ ಇದಾಗಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಅತ್ಯುತ್ತಮ ಬಜೆಟ್ ಇದಾಗಿದೆ.
ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರೈತರ ಆದಾಯವನ್ನು ದ್ವಿಗುಣಗೊಳಿಸಲು ಅವರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೈಗಾರಿಕೆಗಳ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗಿದೆ, ದಿನದಿಂದ ದಿನಕ್ಕೆ ನಗರಗಳಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ ಇದನ್ನು ಗಮನದಲ್ಲಿಟ್ಟುಕೊಂಡು ಮೂಲಭೂತ ಸೌಕರ್ಯಗಳ ಒದಗಿಸುವಿಕೆ, ರೈಲ್ವೆ ಸಂಪರ್ಕ, ರಸ್ತೆಗಳ ನಿರ್ಮಾಣ ಇವುಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನಸಾಮಾನ್ಯರ ದೈನಂದಿನ ಜೀವನ ಸುಲಭವಾಗುವಂತೆ ಯೋಜನೆ ರೂಪಿಸಲಾಗಿದೆ.
ಕಾಂಗ್ರೆಸ್ ಪಕ್ಷವು ಕೇವಲ ಟೀಕೆ ಮಾಡುವುದನ್ನು ಹೊರತುಪಡಿಸಿ, ಅಭಿವೃದ್ಧಿಗೆ ಸ್ಪಂದಿಸಬೇಕು ಎಂದಿದ್ದಾರೆ.





