
ಧಾರವಾಡ : ಧಾರವಾಡ ತಾಲೂಕ ಮುಮ್ಮಿಗಟ್ಟಿ ಗ್ರಾಮದ ಶ್ರೀ ಅಯ್ಯಪ್ಪ ಸೇವಾ ಸಮಿತಿ ಹಾಗೂ ಹಿಂದೂ ದೇವಸ್ಥಾನಗಳ ಜಾಗರಣ ಸಮಿತಿ ಸೇರಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಇರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ರಕ್ಷಣೆ ಹಾಗೂ ಅಭಿವೃದ್ಧಿ ಮಾಡುವ ಕುರಿತು ಕೃಷಿ ವಿಶ್ವವಿದ್ಯಾಲಯದ ಕುಲುಪತಿಗಳು ಹಾಗೂ ಧಾರವಾಡದ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರಿಗೆ ಮುಮ್ಮಿಗಟ್ಟಿ ಗ್ರಾಮದ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳು ಹಾಗೂ ಹಿಂದೂ ಕಾರ್ಯಕರ್ತರು ಸೇರಿ ದೇವಸ್ಥಾನವನ್ನು ಅಭಿವೃದ್ಧಿ ಮಾಡಬೇಕು ಹಾಗೂ ದೇವಸ್ಥಾನಕ್ಕೆ ರಕ್ಷಣೆ ಕೊಡಬೇಕೆಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮುಮ್ಮಿಗಟ್ಟಿ ಗ್ರಾಮಸ್ಥರು ಉಪಸ್ಥಿತ ಇದ್ದರು.