ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ಒಕ್ಕೂಟ

ಬೆಂಗಳೂರು 03 : ಶ್ರಮಿಕ ವರ್ಗವಾದ ಪತ್ರಿಕಾ ವಿತರಕ ಸಮುದಾಯಕ್ಕೆ ಒಳ್ಳೆಯದಾಗಲಿ ಎಂದು ಯೋಜನೆಯನ್ನು ನೀಡಲಾಗಿದ್ದು, ಅದರ ಪ್ರಯೋಜನ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಕೆಯುಡಬ್ಲೂೃಜೆ ಸಂಘಟನೆಯ ಕೋರಿಕೆಯನ್ನು ಮಾನ್ಯ ಮಾಡಿ ಕಾರ್ಮಿಕ ಇಲಾಖೆ ಯೋಜನೆ ಮೂಲಕ ಪತ್ರಿಕಾ ವಿತರಕರಿಗೆ ವಿಮಾ ಸೌಲಭ್ಯ ಪಡೆಯಲು 60 ವರ್ಷ ಇದ್ದ ಮಿತಿಯನ್ನು 70 ವರ್ಷಕ್ಕೆ ಹೆಚ್ಚಳ ಮಾಡಿದ್ದರಿಂದ ತುಂಬಾ ಅನುಕೂಲವಾಗಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿ, ಧನ್ಯವಾದ ಹೇಳಿದರು.

ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇದೇ ಸಂದರ್ಭದಲ್ಲಿ
ಎರಡು ಸಂಘಟನೆಗಳ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಕೆ.ಶಂಭುಲಿಂಗ ಅವರುಗಳು ಅಭಿನಂದಿಸಿ, ಹೊಸ ವರ್ಷದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೊಕೇಶ, ಖಜಾಂಚಿ ವಾಸುದೇವ ಹೊಳ್ಳ ಮತ್ತಿತರರು ಹಾಜರಿದ್ದರು

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!