ಧಾರವಾಡ : ಕೃಷಿ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕೃಷಿ ಮಹಾವಿದ್ಯಾಲಯ ಧಾರವಾಡ ವತಿಯಿಂದ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಜನವರಿ 16 ಮತ್ತು 17 ರಂದು ಬೆಳಿಗ್ಗೆ 11 ಗಂಟೆಗೆ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಘನವೆತ್ತ ಉಪರಾಷ್ಟ್ರಪತಿಗಳಾದ ಜಗದೀಪ ಧನಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಘನವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ವಿನಯ ಕುಲಕರ್ಣಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ, ವಾಯುವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾದ ಭರಮಗೌಡ (ರಾಜು) ಅಲಗೌಡ ಕಾಗೆ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಜೆ.ಎಂ.ಗಣೇಶ್, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷರಾದ ಸೈಯದ್ ಅಜೀಮಪೀರ್ ಎಸ್. ಖಾದ್ರಿ, ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ, ಎನ್.ಎಚ್.ಕೋನರಡ್ಡಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಎಂ.ಆರ್.ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಹಾಪೌರರಾದ ರಾಮಣ್ಣ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷರಾದ ಶಾಕೀರ ಸನದಿ ಅವರು ವಿಶೇಷ ಅತಿಥಿಗಳಾಗಿ ಆಗಮಿಸುವರು ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಪಿ.ಎಲ್.ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.