ಜ್ಯೋತಿಷಿಯೊಬ್ಬರು ಅಂದು ಎಸ್​ಎಂ ಕೃಷ್ಣ ಬಗ್ಗೆ ಭವಿಷ್ಯ ಹೇಳಿದ್ದರು : ಡಿ.ಕೆ.ಶಿವಕುಮಾರ್

ಬೆಳಗಾವಿ ಡಿಸೆಂಬರ : ಬೆಳಗಾವಿ ಅಧಿವೇಶನದ ನಾಲ್ಕನೇ ದಿನವಾದ ಗುರುವಾರದ ಕಲಾಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ ಅವರು ಮಂಗಳವಾರ ನಿಧನರಾದ ಮಾಜಿ ಸಿಎಂ ಎಸ್​ಎಂ ಕೃಷ್ಣಗೆ ನುಡಿ ನಮನ ಸಲ್ಲಿಸಿದರು. ಇದೇ ವೇಳೆ ಅವರು ಜ್ಯೋತಿಷಿಯೊಬ್ಬರು ಅಂದು ಎಸ್​ಎಂ ಕೃಷ್ಣ ಹಾಗೂ ತಮ್ಮ ಬಗ್ಗೆ ನುಡಿದಿದ್ದ ಭವಿಷ್ಯವಾಣಿಯನ್ನು ನೆನಪಿಸಿಕೊಂಡರು. ಇದು ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಧ್ಯೆ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.

ಸದನದಲ್ಲಿ ಡಿ ಕೆ ಶಿವಕುಮಾರ ಹೇಳಿದ್ದೇನು..?

ಎಸ್​​ಎಂ ಕೃಷ್ಣ ಅವರು ರಾಜ್ಯಸಭೆ ಸದಸ್ಯರಾಗುವ ಬಗ್ಗೆ ಜ್ಯೋತಿಷಿ ಅಂದೆ ಭವಿಷ್ಯವನ್ನು ಹೇಳಿದ್ದರು. ನನಗೂ ಅದೇ ಜ್ಯೋತಿಷಿ, ನೀನು ಇಷ್ಟು ವರ್ಷದವರೆಗೆ ಶಾಸಕ ಆಗುತ್ತೀಯಾ, ಮಂತ್ರಿ ಆಗುತ್ತಿಯಾ, ನಿನಗೆ ಟಿಕೆಟ್ ಸಿಗಲ್ಲ ಎಂಬ ಭವಿಷ್ಯಗಳನ್ನು ನುಡಿದಿದ್ದರು. ಯಾವ ಸ್ಥಾನ ಸಿಗುತ್ತದೆ ಎಂದೂ ಹೇಳಿದ್ದರು ಎಂದು ಡಿಕೆ ಶಿವಕುಮಾರ್ ಹೇಳಿದರು.

ಅಶೋಕ್ ಅವರೇ ಜ್ಯೋತಿಷಿ ಏನೇನು ಹೇಳಿದ್ದಾರೆ ಅಂದ್ರೆ ನಿಮ್ಮ (ಬಿಜೆಪಿಯ) ೨೫ ಶಾಸಕರು, ದಳದವರು ನಮ್ಮ(ಕಾಗ್ರೆಂಸ್) ಕಡೆ ಬರಲಿದ್ದಾರೆ. ಹಾಗಾಗಿ ಅದರ ಬಗ್ಗೆ ಇಲ್ಲಿ ಆಶ್ಚರ್ಯ ಬೇಡ, ಕೊಠಡಿಯಲ್ಲಿ ಮಾತನಾಡೋಣ ಎಂದರು. ಜ್ಯೋತಿಷಿ ಡಿಕೆ ಶಿವಕುಮಾರ್​ಗೆ ಸಿಎಂ ಆಗುವ ಭವಿಷ್ಯ ನುಡಿದಿದ್ದರೇ ಎಂಬ ಅನುಮಾನವನ್ನು  ವ್ಯಕ್ತವಾಗಿದೆ.

ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದ್ದೇನು..?

ಡಿಕೆ ಶಿವಕುಮಾರ್ ಮಾತಿಗೆ ಪ್ರತಿಕ್ರಿಯಿಸಿದ ಆ‌ರ್ ಅಶೋಕ್, ನಿಮ್ಮ ಮಾತಿಗೆ ಸಹಮತ ಇದೆ. ಬಹುಶಃ ನೀವೇ ನಮ್ಮ ಕಡೆಗೆ ಬರಬಹುದು. ಆಗ ನಾವೆಲ್ಲಾ ನಿಮ್ಮ ಜೊತೆ ಬರುತ್ತೇವೆ ಎಂದು ಟಾಂಗ್ ಡಿಸಿಎಮ್‌ಗೆ ಕೊಟ್ಟರು.

ಎಸ್​ಎಂ ಕೃಷ್ಣ ನಿಧನದಿಂದ ಸಂತಸವಾಗಿದೆ. ಡಿಕೆ ಶಿವಕುಮಾರ್ ಎಸ್ಎಂ ಕೃಷ್ಣ ಅವರ ನಿಧನ ನನಗೆ ದುಃಖ ತಂದಿಲ್ಲ, ಬದಲಿಗೆ ಸಂತೋಷ ತಂದಿದೆ. ಹುಟ್ಟಿದ ಮೇಲೆ ಒಬ್ಬ ಮನುಷ್ಯ ಸಾಯಲೇಬೇಕು. ಕೃಷ್ಣ ಅವರು ೯೨ ವರ್ಷಗಳ ತುಂಬು ಜೀವನವನ್ನು ನಡೆಸಿದ್ದಾರೆ. ಕೊನೆಯ ನಾಲ್ಕು ತಿಂಗಳು ಮಾತ್ರ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು ಅಷ್ಟೇ. ನಮ್ಮದು ರಾಜಕೀಯ ನಂಟು, ವೈಯಕ್ತಿಕ ಸಂಬಂಧ. ಅವರ ಬದುಕು ಬಹಳ ಹತ್ತಿರದಿಂದ ನೋಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ನಾನು ಕೃಷ್ಣ ಅವರಿಂದ ರಾಜಕೀಯ ಶುರು ಮಾಡಲಿಲ್ಲ. ನಾನು ಬಂಗಾರಪ್ಪ ಅವರಿಂದ ವಿದ್ಯಾರ್ಥಿ ಇದ್ದಾಗಿನಿಂದಲೇ ರಾಜಕೀಯ ಆರಂಭ ಮಾಡಿದ್ದು. ಬಂಗಾರಪ್ಪ ಹೊಸ ಪಕ್ಷ ಕಟ್ಟಿದಾಗ ನಾನು ಕೃಷ್ಣ ಅವರ ಜೊತೆ ಹೋದೆ. ಆಗ ನಾನು ರಾಜಕೀಯದಲ್ಲಿದ್ದೆ, ಶಾಸಕ ಆಗಿದ್ದೆ. ನಮ್ಮಿಬ್ಬರದ್ದು ತಂದೆ ಮಗನ ಸಂಬಂಧ ತರಹ ಇತ್ತು. ಒಂದೆರಡು ಮೂರು ವಿಚಾರಗಳಲ್ಲಿ ನನಗೂ ಕೃಷ್ಣ ಅವರಿಗೂ ಭಿನ್ನಾಭಿಪ್ರಾಯ ಇತ್ತು, ಅದೇನು ಭಿನ್ನಾಭಿಪ್ರಾಯ ಅಂತ ನಾನು ಇಲ್ಲಿ ಹೇಳುವುದಿಲ್ಲ. ಆದರ್ಶ ಇಲ್ಲದ ಬದುಕು ಬದುಕಲ್ಲ ಅಂತ ವಿವೇಕಾನಂದರು ಹೇಳಿದ್ದಾರೆ. ಕೃಷ್ಣ ಅವರು ಆದರ್ಶ ಬದುಕು ಬಿಟ್ಟು ಹೋಗಿದ್ದಾರೆ. ಅವರು ೯೨ ವರ್ಷಗಳ ತುಂಬು ಜೀವನ ನಡೆಸಿದ್ದಾರೆ. ಅರ್ಥಪೂರ್ಣವಾದ ಸಂಪೂರ್ಣ ಬದುಕು ಅವರದ್ದು. ಈ ವಿಚಾರದಲ್ಲಿ ಸಂತಸವಿದೆ ಎಂದು ಅವರು ಹೇಳಿದ್ದಾರೆ.

ನಂತರ ಮಾತನಾಡಿದ ಅಶೋಕ್, ಎಸ್​ಎಂ ಕೃಷ್ಣಗೆ ನಮನ ಸಲ್ಲಿಸಿದರು. ಅಂತ್ಯಸಂಸ್ಕಾರಕ್ಕೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದಕ್ಕೆ ಡಿಕೆ ಶಿವಕುಮಾರ್ ಹಾಗೂ ಶಾಸಕ ಅಶ್ವತ್ಥನಾರಾಯಣಗೆ ಅಭಿನಂದನೆಯನ್ನು ಸಲ್ಲಿಸಿದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!