ಡಿ ಸಿ ಕಚೇರಿಯ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಧಾರವಾಡ  : ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೇಡಿಕೆ ಇಡೇರಿಕೆಗೆ.ಡಿ ಸಿ ಕಚೇರಿಯ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮಾಡಿ ಮನವಿ ಅಪಿ೯ಸಿದರು.
ಆಶಾ ಕಾರ್ಯಕರ್ತೆಯರಿಗೆ, ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಮತ್ತು ರಾಜ್ಯ ಸರ್ಕಾರದ ನಿಶ್ಚಿತ ಮಾಸಿಕ ಗೌರವಧನ ಹಾಗೂ ಪ್ರನಾಳಿಕೆಯ ಭರವಸೆಯ ಮೊತ್ತ ಒಟ್ಟುಗೂಡಿಸಿ ರೂ. 15,000 ಮಾಸಿಕ ನಿಶ್ಚಿತ ಗೌರವಧನ ನೀಡಬೇಕು ಎನ್ನುವ ಬಹುದಿನಗಳ ಬೇಡಿಕೆಯೂ ಸೇರಿದಂತೆ , ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಬೇಕೆಂದು ಕೋರಿ, ರಾಜ್ಯದ ಆಶಾ ಕಾರ್ಯಕರ್ತೆಯರು. ಹಗಲಿರುಳು ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಿ ಕೊಡಲು ಆರೋಗ್ಯ ಇಲಾಖೆಯಲ್ಲಿ ಪರಿಶ್ರಮಿಸುತ್ತಿರುವುದು ನಿಮಗೆ ತಿಳಿದಿದೆ , ನಮ್ಮಂತೆಯೇ ರಾಜ್ಯದಲ್ಲಿ ಸರಿ ಸುಮಾರು 42,000 ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸಿ ಸಮಗ್ರ ಅಭಿವೃದ್ಧಿಯ ಕುರಿತು ಸಮಾಜದ ಆರೋಗ್ಯಕರ ಬದಲಾವಣೆಗೆ ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ. ಹಾಗೆಯೇ ಕೋವಿಡ್-19 ಸಂದರ್ಭದಲ್ಲಿ ಈ ಫಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯಿಂದ ಹಿಡಿದು ಎಲ್ಲರೂ ಶ್ಲಾಘಿಸಿದ್ದಾರೆ.

ಈ ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇದಿತರನ್ನು ‘ಆಶಾ’ ಗಳನ್ನಾಗಿ ನೇಮಕ ಮಾಡಿಕೊಂಡು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲಾಗುತ್ತದೆ ಎಂಬುದು ಸರ್ಕಾರದ ಘೋಷಣೆ. ಆದರೆ ಆಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕುತ್ತಿಲ್ಲವೆಂಬುದು ವಾಸ್ತವ. ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್‌ನಲ್ಲಿ ಆನ್ಸನ್ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ದಾಖಲಾಗದ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹಧನ ಸಿಗುತ್ತಿಲ್ಲ, ಹಲವಾರು ಸಮಸ್ಯೆಯಿಂದ ಆಶಾ ಕಾರ್ಯಕರ್ತೆಯರಿಗೆ ಬಹು ದೊಡ್ಡ ಪ್ರಮಾಣದ ಅನ್ಯಾಯ ಆಗುತ್ತಿದೆ” ಸಮಸ್ಯೆಗಳ ಕುರಿತು ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಕಳೆದ 8 ವರ್ಷಗಳಿಂದ ಲೆಕ್ಕವಿಲ್ಲದಷ್ಟು ದೂರುಗಳನ್ನು ಸಲ್ಲಿಸಲಾಗಿದೆ. ಲೆಕ್ಕವಿಲ್ಲದಷ್ಟು ಸಭೆಗಳು, ಚರ್ಚೆಗಳು, ನಡೆದಿವೆ. ಇಲಾಖೆಯಿಂದ ಮತ್ತು ಸರ್ಕಾರದಿಂದ ಕೈಗೊಂಡ ಯಾವುದೇ ಕ್ರಮದಿಂದ ಸಮಸ್ಯೆ ಪರಿಹಾರವಾಗದೇ ಹಾಗೆಯೇ ಉಳಿದಿವೆ. ಅದರಿಂದಾಗಿ ಪ್ರತಿಯೊಬ್ಬ ಆಶಾ ಸಾವಿರಾರು ರೂ. ಆರ್ಥಿಕ ನಷ್ಟ ಅನುಭವಿಸಿರುವರು.

ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸಲು, ರಾಜ್ಯ ಸರ್ಕಾರ ಈಗ ನೀಡುತ್ತಿರುವ ರೂ.5000 ಮಾಸಿಕ ನಿಶ್ಚಿತ ಗೌರವಧನ ಮತ್ತು ವಿವಿಧ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ.7000 (ಪ್ರೋತ್ಸಾಹಧನ ಆಶಾ ಸಾಫ್ಟ್ ಆನ್‌ಲೈನ್‌ ಸಮಸ್ಯೆಯಿಂದ ಕೇಂದ್ರದ ಈ ಪ್ರೋತ್ಸಾಹಧನ ಸಂಪೂರ್ಣ ಬರುತ್ತಿಲ್ಲ)ಹಾಗೂ ರಾಜ್ಯ ಸರ್ಕಾರದ ಪ್ರತಿಷ್ಠೆಯ ಐದು ಗ್ಯಾರಂಟಿಗಳ ಜೊತೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆಯ ನೀಡಿರುವ ರೂ. 3000 ಗಳನ್ನು ಒಟ್ಟುಗೂಡಿಸಿ ಮಾಸಿಕ ರೂ.15,000 ಗೌರವಧನ ನಿಗದಿ ಮಾಡಬೇಕು ಮತ್ತು ಇತರ 4 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, 13-14 ಫೆಬ್ರವರಿ 2024 ರಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್‌ ಅನಿರ್ಧಿಷ್ಟ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಹೋರಾಟದ ಸಂದರ್ಭದಲ್ಲಿ ಮಾನ್ಯರಾದ ತಾವು “ನನ್ನನ್ನು ನಂಬಿ, ಹೋರಾಟ ಹಿಂತೆಗೆದುಕೊಳ್ಳಿ, ಮುಂದಿನ ಕೆಲವೇ ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿರುವಿರಿ”. ಅದೇ ರೀತಿ ಸನ್ಮಾನ್ಯ ಉಪ ಮುಖ್ಯಮಂತ್ರಿಗಳೂ “ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು.ನಂತರದ ದಿನಗಳಲ್ಲಿ ಮಾನ್ಯ ತಾವು.ಉಪಮುಖ್ಯಮಂತ್ರಿಗಳು, ಇಲಾಖೆಯ ಸಚಿವರು, ಸಮಸ್ಯೆಗಳನ್ನು ಬಗೆಹರಿಸಲಿಲ್ಲ.

ಆದರೂ ಸಂಘದಿಂದ ನಿರಂತರವಾಗಿ ಮಾನ್ಯರಾದ ತಮ್ಮ ಕಾರ್ಯದರ್ಶಿಗಳಾದ ಎ.ಸಿ.ಎಸ್ ಅವರ ಜೊತೆಯಲ್ಲಿ 2 ಬಾರಿ ಸಭೆಗಳು ನಡೆದರೂ ಸಮಸ್ಯೆ ಬಗೆಹರಿದಿಲ್ಲ. ಮಾನ್ಯ ಆರೋಗ್ಯ ಸಚಿವರು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಆಯುಕ್ತರು, ಎಂ.ಡಿ, ಎನ್.ಎಚ್.ಎಂ ಸೇರಿದಂತೆ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳ ಜೊತೆಯಲ್ಲಿ 13 ಬಾರಿ ಸಭೆಗಳು ನಡೆದಿವೆ. ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತೆಯರು ಲೆಕ್ಕವಿಲ್ಲದಷ್ಟು ಸಂದರ್ಭಗಳಲ್ಲಿ ಸರ್ಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಚಿವರು, ಶಾಸಕರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆ ಪರಿಹರಿಸಿ ಎಂದು ಕೋರಿಕೊಂಡಿದ್ದಾರೆ. ಒಟ್ಟಾರೆಯಾಗಿ, ಫೆಬ್ರುವರಿ ಹೋರಾಟದ ನಂತರ ಕಳೆದ 9 ತಿಂಗಳುಗಳ ಅವಧಿಯಲ್ಲಿ ಸರ್ಕಾರ ಮತ್ತು ಇಲಾಖೆಯ ಜೊತೆಯಲ್ಲಿ ಒಟ್ಟು 15 ರಾಜ್ಯ ಮಟ್ಟದ ಸಭೆಗಳು ನಡೆದರೂ ಆಶಾ ಕಾರ್ಯಕರ್ತೆಯರ ಮಾಸಿಕ ಕನಿಷ್ಟ ಗೌರವಧನವೂ ಸೇರಿದಂತೆ ಇತರ ಪ್ರಮುಖ ಬೇಡಿಕೆಗಳಲ್ಲಿ ಯಾವೊಂದೂ ಸಮಸ್ಯೆಗೆಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ಮತ್ತು ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಹೇಳಲು ಇಚ್ಚಿಸುತ್ತೇವೆ. ನಮ್ಮ ಎಲ್ಲಾ ಪ್ರಯತ್ನದ ಹೊರತಾಗಿಯೂ ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.15,000 ಗೌರವಧನ ವನ್ನು ನಿಗದಿಪಡಿಸುವುದೂ ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಈ ಕುರಿತು ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಘೋಷಿಸಿ, ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸಂಯೋಜಿತ “ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಈ ಮೂಲಕ ತಮ್ಮನ್ನು ಕೋರುತ್ತೇವೆ.

ಪ್ರಮುಖ ಹಕ್ಕೊತ್ತಾಯಗಳು:
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಈಗಿರುವ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು ರೂ.12000 ಮತ್ತು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ರೂ 3000 ಹೆಚ್ಚಳ ಸೇರಿಸಿ, ಒಟ್ಟು ರೂ. 15000 ಮಾಸಿಕ ಗೌರವಧನ ನಿಗದಿಯಾಗಬೇಕು.
ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ರೂ.2000ರಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು.

ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್ ಡಾಟಾ ಒದಗಿಸಿ, ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಿ.ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೊ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ.

60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ರೂ.3 ಲಕ್ಷಕ್ಕೆಹೆಚ್ಚಿಸುವುದು.

ತೀವ್ರವಾದ ಅನಾರೋಗ್ಯ ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು. ಆಶಾ ಸೇವೆಯಲ್ಲಿ ಇದ್ದಾಗ ಆಗುವ ವಹಿಸಿಕೊಳ್ಳಬೇಕು.

ಅನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಬೇಕು.

ಪ್ರತೀ ವರ್ಷ ಪ್ರತೀ ಆಶಾ ಕಾರ್ಯಕರ್ತೆಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಚಿಕಿತ್ಸೆ ಮಾಡಬೇಕು.

ಕೂಡಲೇ ಉಚಿತ ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್‌ಐ ಸೌಲಭ್ಯ ನೀಡಿರಿ ಎಂಬ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿದೆ.ಭುವನಾ ಬಳ್ಳಾರಿ, ಗಿರಿಜಾ ಭೂಸನೂರಮಠ, ಮಜುಳಾ ಗಾಡಗೋಳಿ, ಶೋಭಾ ಹಿರೇಮಠ. ಜಯಶ್ರೀ ದೇಸಾಯಿ, ಭಾರತೀ ಶೆಟ್ಟ‌ರ, ಸ್ವಪ್ನಾ ಸುಳ್ಯದ, ಸರೋಜಾ ಮಡಿವಾಳರ, ಶೈಲಾ ಮುದುಗಲ್ ಮುಂತಾದವರು ಇದ್ದರು.

  • Related Posts

    ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ

    ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ  ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…

    ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷರರ ಹುದ್ದೆಗೆ ಅರ್ಜಿ ಆಹ್ವಾನ

    ಧಾರವಾಡ ಡಿ.೨೧ :  2024-25 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ…

    RSS
    Follow by Email
    Telegram
    WhatsApp
    URL has been copied successfully!