ಹುಬ್ಬಳ್ಳಿ 02 : ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ ಹೊರ ರೋಗಿಯೊಬ್ಬ ಇದ್ದಕ್ಕಿದ್ದಂತೆ ನಾಪತ್ತೆ ಆಗಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.
ಯಲ್ಲಪ್ಪ ಎಂಬುವ ವ್ಯಕ್ತಿ ಮೆದುಳು ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಡಿ.26ರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಾಪತ್ತೆಯಾದ ರೋಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತರಗಿ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.
ಯಲ್ಲಪ್ಪ ಜನೆವರಿ 2ರಂದು ಬೆಳಗಿನ ಜಾವ ಆಸ್ಪತ್ರೆಯಲ್ಲಿದ್ದ ಬೆಡ್ ಶೀಟ್ ಹೊದ್ದುಕೊಂಡು ಪರಾರಿಯಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.
ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.