ಧಾರವಾಡ ಡಿಸೆಂಬರ 31: ಕೆನರಾ ಬ್ಯಾಂಕ್, ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ಸಹಯೋಗದಲ್ಲಿ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ಯುವಕ ಮತ್ತು ಯುವತಿಯರಿಗೆ ಹಳಿಯಾಳದಲ್ಲಿ ವಿವಿಧ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಬರುವ ಜನವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಯ ಉಚಿತ ತರಬೇತಿಗಾಗಿ ಮತ್ತು ಫೆಬ್ರುವರಿ ತಿಂಗಳಲ್ಲಿ ಮಹಿಳೆಯರಿಗೆ ವಸ್ತ್ರವಿನ್ಯಾಸ (ಹೊಲಿಗೆ) ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 10, 2024 ರೊಳಗಾಗಿ ತಮ್ಮ ಹೆಸರು, ವಿಳಾಸಗಳನ್ನು ನೊಂದಾಯಿಸಿಕೊಳ್ಳಬೇಕೆಂದು ಕೆನರಾ ಬ್ಯಾಂಕ್, ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ನಿರ್ದೇಶಕ ಪ್ರಶಾಂತ ಬಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.