ಜಾತಿ ನಿಂದನೆ: ಮೂವರ ಮೇಲೆ ಪ್ರಕರಣ ದಾಖಲು

ಧಾರವಾಡ 31 : ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನ ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ ಮಾಡಿದ ಘಟನೆ ಜರುಗಿದೆ.

ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ ಎಂಬುವವರು ಕುರಿಗಳಿಗೆ ಹುಲ್ಲು ತರಲು ಹೋದಾಗ ಜಮೀನಿನಲ್ಲಿ ಬೆಳೆದಿದ್ದ ಕಡ್ಲಿ ಗಿಡವನ್ನು ಕಿತ್ತುಕೊಂಡ ಪರಿಣಾಮ ಪ್ರವೀಣ ಉಳವಪ್ಪ ಪೊಮೋಜಿ, ಬಸು ರಾಜಪ್ಪ ಪೋಮೋಜಿ, ನಿಂಗಪ್ಪ ರಾಜಪ್ಪ ಪೊಮೋಜಿ ಎಂಬ ಮೂವರು ವ್ಯಕ್ತಿಗಳು ಸೇರಿಕೊಂಡು ಜಾತಿ ನಿಂದನೆ ಮಾಡಿ, ಅಪ್ರಾಪ್ತ ಹುಡುಗರ ಮೇಲೆ ಮನಬಂದಂತೆ ಥಳಿಸಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿಗಳು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ.

ಹಲ್ಲೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿ ಕಾನೂನು‌ ಕ್ರಮ ಜರುಗಿಸಿದ್ದಾರೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ಭೀಮಸೇನೆ ಸಮಿತಿಯ ರಾಜ್ಯಾಧ್ಯಕ್ಷ ಬಿ.ಡಿ.ಮಾದರ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾದ ಹುಡುಗರ ಆರೋಗ್ಯ ವಿಚಾರಿಸಿ, ಕುಟುಂಬ ಸದಸ್ಯರಿಗೆ ನೈತಿಕ ಧೈರ್ಯ ತುಂಬಿದರು.

ನಂತರ ಧಾರವಾಡ ನ್ಯೂಸ್ ನೊಂದಿಗೆ ಮಾತನಾಡಿದ ಅವರು, ಶತಶತಮಾನಗಳಿಂದ ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅದನ್ನು ತಡೆಯಲು ಅನೇಕ ಕಾನೂನುಗಳಿದ್ದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಕೂಡಲೇ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ನಮ್ಮ ಸ್ವಾಭಿಮಾನವನ್ನು ಕೆದಕುವ ಕೆಲಸ ಮಾಡಬಾರದು. ಪೊಲೀಸರು ಹಲ್ಲೆಗೊಳಗಾದ ವ್ಯಕ್ತಿಗಳಿಗೆ ಹಾಗೂ ಕುಟುಂಬ ಸದಸ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅಗ್ರಹಿಸಿದರು.

ಹಲ್ಲೆಗೊಳಗಾದ ಹುಡುಗರ ತಾಯಂದಿರುಗಳು ಮಾತನಾಡಿ, ತಮಗಾದ ಅನ್ಯಾಯದ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸತೀಶ ಸರ್ಜಾಪುರ ಯುವ ಮುಖಂಡ ಶ್ರೀನಿವಾಸ ಅವರೊಳ್ಳಿ, ಕುಮಾರ ವಕ್ಕುಂದ, ಮಂಜುನಾಥ ಹಡಪದ, ಆನಂದ ಕೊಣ್ಣೂರ, ರಮೇಶ ಮುಳಗುಂದ, ಅಶೋಕ ಶಿರಹಟ್ಟಿ, ಚಂದ್ರಶೇಖರ ಹಿರೇಮಠ, ಮುತ್ತು ಗಡೇಕರ ಸೇರಿದಂತೆ ಇನ್ನಿತರರು ಇದ್ದರು.

  • Related Posts

    ಬಂಧಿಖಾನೆ ಮನಪರಿವರ್ತನೆಗಿರುವ ಒಂದು ಅವಕಾಶ

    ಧಾರವಾಡ:– ಸಾಧನಾ ಮಹಿಳಾ ಮತ್ತು ‌ಮಕ್ಕಳ ಅಭಿವೃದ್ಧಿ ಸಂಸ್ಥೆ ,ಪ್ರೀಜನ್ ಮಿನಿಸ್ಟರಿ ಇಂಡಿಯಾ – ಧಾರವಾಡ ಮತ್ತು ವಿನ್ಸೆಂಟ್ ಡಿ ಪೌಲ‌ ನಿರ್ಮಲನಗರ ಧಾರವಾಡ ಕೇಂದ್ರ ಕಾರಾಗೃಹ ಧಾರವಾಡ ಇವರ ಸಹಯೋಗದಲ್ಲಿ ಬಂಧಿಖಾನೆ ಮಹಿಳಾ ನಿವಾಸಿಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ‌ಆಯೋಜಿಸಲಾಗಿತ್ತು.…

    ಹು -ಧಾ ಮಹಾನಗರ ಪಾಲಿಕೆಯ ಅಧಿಕಾರಿಗಳು ಜನ್ನತ್ ನಗರಕ್ಕೆ ಭೇಟಿ

    ಧಾರವಾಡ 21 : ಎಸ್.ಯು.ಸಿ.ಐ.ಕಮ್ಯುನಿಸ್ಟ್ ಪಕ್ಷದ ಮನವಿಗೆ ಸ್ಪಂದಿಸಿ ಜನ್ನತ್ ನಗರಕ್ಕೆ ಭೇಟಿಮಾಡಿ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ ಪಾಲಿಕೆ ಅಧಿಕಾರಿಗಳು. ಜನ್ನತ್ ನಗರದ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು…

    RSS
    Follow by Email
    Telegram
    WhatsApp
    URL has been copied successfully!