
ಧಾರವಾಡ 25 : ಸಂಯುಕ್ತ ಹೋರಾಟ ಕರ್ನಾಟಕ ಧಾರವಾಡ ಜಿಲ್ಲಾ ಸಂಘಟನಾ ಸಮಿತಿ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ರೈತರ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಖಾತ್ರಿಪಡಿಸಲು, ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಾಸ್ ಪಡೆದ ಒತ್ತಾಯಿಸಿ ಧಾರವಾಡ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ ಉಪಾಧ್ಯಕ್ಷರಾದ ನಾಗಪ್ಪ ಉಂಡಿ , ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷರಾದ ದೀಪಾ ಧಾರವಾಡ, ರೈತ ಸೇನಾ ಕರ್ನಾಟಕದ ರಾಜ್ಯ ಅಧ್ಯಕ್ಷರಾದ ಶಂಕರ್ ಅಂಬಲಿ,ಸಿ ಐ ಟಿ ಯು ನ ಜಿಲ್ಲಾ ಅಧ್ಯಕ್ಷರಾದ ಬಿ ಐ ಇಳಿಗೆರೆ, ರಾಜ್ಯ ಕಾರ್ಯದರ್ಶಿಗಳಾದ ಮಹೇಶ್ ಪತ್ತಾರ್, ಎ ಐ ಯು ಟಿ ಯು ಸಿ ಜಿಲ್ಲಾ ಅಧ್ಯಕ್ಷರಾದ ಗಂಗಾಧರ ಬಡಿಗೇರ್ ಮುಂತಾದವರು ಈ ಸಂದರ್ಭದಲ್ಲಿ ಇದ್ದರು.