ಧಾರವಾಡ : ಅಣ್ಣಿಗೇರಿ ಪುರಸಭೆ ಕಾರ್ಯಾಲಯ ವ್ಯಾಪ್ತಿಯಲ್ಲಿ ಕೇಂದ್ರ ಪುರಸ್ಕ್ರತ ಅಮೃತ 2.0 ಯೋಜನೆಯ ಘಟಕವಾದ ಅಮೃತ ಮಿತ್ರ ಮಾರ್ಗಸೂಚಿ ಅನುಸಾರ ಡೇ-ನಲ್ಮ್ ಯೋಜನೆ ಅಡಿಯಲ್ಲಿ ರಚನೆಯಾದಂತ ಮಹಿಳಾ ಸ್ವ-ಸಹಾಯ ಸಂಘಗಳ ಮೂಲಕ ಸಾರ್ವಜನಿಕ ಉಧ್ಯಾನವನ ಮತ್ತು ಆಟದ ಮೈದಾನಗಳ ನಿರ್ವಹಣೆ ಕುರಿತು ತಾಂತ್ರಿಕೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮಹಿಳಾ ಸಂಘಗಳು ಅಣ್ಣಿಗೇರಿ ಪುರಸಭೆ ಕಾರ್ಯಾಲಯದಿಂದ ಅರ್ಜಿ ಪಡೆದು, ಡಿಸೆಂಬರ್ 15, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಮ ವಿಭಾಗದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅಣ್ಣಿಗೇರಿ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.