ಅಯ್ಯಪ್ಪ ಮಾಲಾಧಾರಿಗಳ ಸಾವು: ಸಚಿವ ಸಂತೋಷ್ ಲಾಡ್ ಸಂತಾಪ

ಗಾಯಾಳುಗಳನ್ನು ಉಳಿಸಿಕೊಳ್ಳಲಾಗಲಿಲ್ಲ ಎಂಬ ಕೊರಗು ಕಾಡುತ್ತಿದೆ ಎಂದ ಸಚಿವ ಲಾಡ್

ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ನಿನ್ನೆ ಒಬ್ಬರು ಹಾಗೂ ಇಂದು ಒಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 7ಕ್ಕೇರಿದೆ.

9 ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತಿಬ್ಬರು ಗಾಯಾಳುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ವಿಷಯ ಕೇಳಿ ದುಃಖಿತನಾಗಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ಎಷ್ಟೇ ಪ್ರಯತ್ನ ಪಟ್ಟರೂ ಗಾಯಾಳುಗಳನ್ನು ಉಳಿಸಿಕೊಳ್ಳಲಾಗಲಿಲ್ಲ ಎಂಬ ಕೊರಗು ಬಾಧಿಸುತ್ತಿದೆ. ಅಗಲಿದ ಜೀವಗಳ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಮೃತರ ಆತ್ಮಕ್ಕೆ ಸದ್ಗತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.

ಗಾಯಾಳು ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ನಲ್ಲಿ ಅತ್ಯುತ್ತಮ ಚಿಕಿತ್ಸೆ ನೀಡಲಾಗುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಉಳಿಸಿಕೊಳ್ಳಲಾಗುತ್ತಿಲ್ಲ.

ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸಚಿವ ಲಾಡ್ ಅವರು ಸಾಕಷ್ಟು ಮುತುವರ್ಜಿ ವಹಿಸಿದ್ದರು. ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಯ ತಜ್ಞ ವೈದ್ಯರ ತಂಡವನ್ನು ಕಿಮ್ಸ್ ಗೆ ಕರೆಸಿದ್ದರು.

ಸಂತೋಷ್ ಲಾಡ್ ಅವರು ತಮ್ಮ ಸಂತೋಷ್ ಲಾಡ್ ಫೌಂಡೇಶನ್ ಮೂಲಕ ಗಾಯಾಳುಗಳ ಕುಟುಂಬಕ್ಕೆ ಧನ ಸಹಾಯವನ್ನು ನೀಡಿದ್ದರು. ಅಲ್ಲದೇ ಸರ್ಕಾರ ದಿಂದಲೂ ಪರಿಹಾರ ನೀಡಲಾಗಿದೆ.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!