ಕೃಷಿ ಇಲಾಖೆ ಫೆ.15 ರೊಳಗೆ ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ

ಧಾರವಾಡ  ಜ.31 : 2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈಗಾಗಲೇ (ಖಾಸಗಿ ನಿವಾಸಿ) ಪಿಆರ್‍ಗಳು ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳ ಛಾಯಾ ಚಿತ್ರವನ್ನು ಬೆಳೆ ಸಮೀಕ್ಷೆ ಮೊಬೈಲ್ ರೈತರ ಆಪ್‍ನಲ್ಲಿ ದಾಖಲಿಸಿದ್ದು, ಸದರಿ ಮಾಹಿತಿಯು ಬೆಳೆ ವಿಮೆ, ಬೆಳೆ ನಷ್ಟ, ಪರಿಹಾರ ಬೆಂಬಲ ಬೆಲೆ ಹಾಗೂ ಇನ್ನಿತರ ಸರ್ಕಾರದ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಆರ್‍ಟಿಸಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ.
ಈಗಾಗಲೇ ಮಾಡಿರುವ ಬೆಳೆ ಸಮೀಕ್ಷೆ ಕುರಿತು ಏನಾದರೂ ಅಕ್ಷಪಣೆಗಳಿದ್ದಲ್ಲಿ ರೈತರು ಬೆಳೆ ದರ್ಶಕ ಮೊಬೈಲ್ ಆಪ್ (ಒobiಟe ಂಠಿಠಿ) ಮೂಲಕ ಫೆಬ್ರವರಿ 15, 2025 ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದು. ತಮ್ಮ ಗ್ರಾಮಗಳ ಪಿಆರ್‍ಗಳನ್ನು ಅಥವಾ ಸಮೀಪದ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಹಾಯ ಪಡೆದು ಆಕ್ಷೇಪಣೆ ಸಲ್ಲಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!