ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು.
ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು ಆನಂದಿಸಬೇಕು ಎಂದು ತಿಳಿಸಿದರು.
ಸುತ್ತಮುತ್ತಲಿನ ಸುಂದರ ಪರಿಸರವನ್ನು ನೋಡಿ ಕಣ್ಣಿನ ಕ್ಯಾಮೆರಾದಲ್ಲಿ ಗ್ರಹಿಸಬೇಕು, ಏಕಾಗ್ರತೆಯಿಂದ ಓದಿದರೆ ನೀವು ಗುರಿ ತಲುಪಲು ಸಾಧ್ಯವಿದೆ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೊಡಾ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ ತುಂಬಾ ಸಂತೋಷವಾಗಿದೆ ಎಂದು ಮನೋವೈದ್ಯರಾದ ಡಾ.ಆನಂದ ಪಾಂಡುರಂಗಿ ಹೇಳಿದರು.
ಅತ್ಯಂತ ಜಾಗೃತೆಯಿಂದ ಮೊಬೈಲ್ ನ್ನು ಬಳಕೆ ಮಾಡಿ ಹೆಚ್ಚಾಗಿ ಹೆಣ್ಣು ಮಕ್ಕಳು ಅಪರಿಚಿತ ಕರೆಗಳಿಗೆ ಉತ್ತರ ಕೊಡಬೇಡಿ ಎಂದು ಕಿವಿಮಾತು ಹೇಳಿದರು.
ಅವರು ಮಾಳಮಡ್ಡಿಯ ಕೆ.ಇ ಬೋರ್ಡ್ ಸಂಯುಕ್ತ ಪದವಿ ಪೂರ್ವ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ವಿದ್ಯಾರ್ಥಿ ಒಕ್ಕೂಟ ಹಾಗೂ ಕ್ರೀಡಾ ಚಟುವಟಿಕೆಗಳ ಮುಕ್ತಾಯ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುವ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥೈರ್ಯ ಮತ್ತು ಪರೀಕ್ಷಾ ಪೂರ್ವ ತಯಾರಿಯ ಕುರಿತು ಉಪನ್ಯಾಸ ನೀಡಿದರು.
ಕೆ ಇ ಬೋರ್ಡಿನ ಕ್ರೀಡಾಭಿವೃದ್ದಿ ಅಧಿಕಾರಿಗಳಾದ ವಸಂತ ಮುರ್ಡೇಶ್ವರ ಮಾತನಾಡಿ ನಮ್ಮ ಸಂಸ್ಥೆಯಲ್ಲೇ ಮುಸ್ಲಿಂ ವಿದ್ಯಾರ್ಥಿನಿ ಅಶಮೀರಾಬಾನು ಕನ್ಕಿ ಕಠಿಣ ಪರಿಶ್ರಮ ಪಟ್ಟು ವಿಧ್ಯಾ ಅಭ್ಯಾಸ ಮಾಡಿದಳು ಅವಳಿಗೆ ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಮಾಡಿದಳು ಅದರಿಂದ ಅವಳು ಇಂದು ಕೇಂದ್ರ ಸರ್ಕಾರದ ಸಂಗೋಳ್ಳಿ ರಾಯಣ್ಣ ರೇಲ್ವೆ ನಿಲ್ದಾಣ ಬೆಂಗಳೂರದಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾಳೆ ಎಂದು ಹೇಳಿದರು.
ಭಯವಿಲ್ಲದೇ ಪರೀಕ್ಷೆಯನ್ನು ಬರೆಯಿರಿ ಮತ್ತು ಕಡಿಮೆ ಅಂಕ ಬಂದರು ವಿದ್ಯಾರ್ಥಿಗಳಿಗೆ ಬೇಜಾರ ಮಾಡಿಕೊಳ್ಳಬೇಡಿ ಎಂದರು.
ಎನ್.ಎಸ್.ಕುಲಕುರ್ಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಾಕ್ಟರ್ ಎಸ್.ಎಸ್.ಹನುಮಂತಗಡ, ಅವರು ಮಾತನಾಡಿದರು.
ಕೆ.ಇ.ಬೋರ್ಡ್ ಕಾಲೇಜಿನ ಪ್ರಾಂಶುಪಾಲರಾದ ಸುನಿತಾ ಕಡಪಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಚಾರ್ಯರಾದ ಎನ್.ಎಸ್.ಗೋವಿಂದರೆಡ್ಡಿ, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾದ ಸಂತೋಷ ವಕ್ಕುಂದ, ಆಕಾಶ ಲಮಾಣಿ, ವೇದಿಕೆ ಮೇಲೆ ಇದ್ದರು.
2024-25 ಸಾಲಿನ ಕಾಲೇಜಿನ ಕಾರ್ಯಚಟುವಟಿಕೆಗಳ ವರದಿಯನ್ನು ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷರಾದ ಸುಮಾ ಬಿಸಗುಪ್ಪಿ ಮಂಡಿಸಿದರು.
2024-25 ಸಾಲಿನ ವಾರ್ಷಿಕ ಕ್ರೀಡಾಕೂಟದ ಚಟುವಟಿಕೆಗಳ ವರದಿಯನ್ನು ದೈಹಿಕ ಶಿಕ್ಷಣ ಉಪನ್ಯಾಸಕರಾದ ಆರ್.ಕೆ. ಇಸ್ಲಾಂಪುರೆ ಸಲ್ಲಿಸಿದರು.
ಪ್ರಸ್ತುತ ಸಾಲಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು.
ವಿವಿಧ ಜಿಲ್ಲೆಗಳಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಆಟ ಆಡಿ ಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು.
ಅಮುಲ್ಯಾ ಮತ್ತು ಪವಿತ್ರಾ ನಿರೂಪಿಸಿದರು. ಸುಮಾ ಬಿಸಗುಪ್ಪಿ ವಂದಿಸಿದರು.
ಈ ಸಂದರ್ಭದಲ್ಲಿ ಕೆ.ಇ ಬೋರ್ಡ್ ಕಾಲೇಜಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು.
ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು