ಪರಿಸರದ ಸ್ಥಿರತೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ – ಸಿಂಚನಾ ಕಟ್ಟಗಿ ಪ್ರಥಮ

ಧಾರವಾಡ : ನವದೆಹಲಿಯಲ್ಲಿ ಜನವರಿ 11 ಮತ್ತು 12 ರಂದು ನಡೆದ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಧಾರವಾಡ ನಗರದ ವ್ಯದ್ಯಕೀಯ ವಿದ್ಯಾರ್ಥಿನಿ ಸಿಂಚನಾ ಕಟ್ಟಗಿ ಅವರು ‘ ಕಮ್ಯುನಿಟಿ ಮೆಡಿಸಿನ್‌’ ವಿಷಯದ ಕುರಿತು ಪ್ರಬಂಧ ಮಂಡಿಸಿ ರಾಜ್ಯದ ಗರಿಮೆ ಹೆಚ್ಚಿಸಿದ್ದಾರೆ. ನವದೆಹಲಿಯಲ್ಲಿ ‌ನಡೆದ ಯುವ ಜನೋತ್ಸವಕ್ಕೆ ರಾಜ್ಯದಿಂದ 45 ವಿದ್ಯಾರ್ಥಿಗಳಲ್ಲಿ ಸಿಂಚನಾ ಕಟಗಿ ಒಬ್ಬರು. ಇವರು ಭಾರತ ಸರ್ಕಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಎನ್.ಎಸ್.ಎಸ್ ಕೋಶ ಮತ್ತು ಯುವ ಸಬಲೀಕರಣ ಇಲಾಖೆ‌ಗಳ‌ ಸಹಯೋಗದಲ್ಲಿ ಬೆಂಗಳೂರಿನ ಶೇಷಾಸ್ರಿಪುರಂನಲ್ಲಿ ಏರ್ಪಡಿಸಸಿದ್ದ ವಿಕಸಿತ ಭಾರತ ಅಡಿಯಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ‘ಪರಿಸರದ ಸ್ಥಿರತೆ’ ಎಂಬ ವಿಷಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಯುವ ಜನೋತ್ಸವಕ್ಕೆ ಆಯ್ಕೆ ಆಗಿದ್ದರು. ಪ್ರಸ್ತುತ ಸಿಂಚನಾ ಅವರು ಬಾಗಲಕೋಟೆಯ ಎಸ್. ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಆಗಿದ್ದು, ಇವರಿಗೆ ತಂದೆ ಕರ್ನಾಟಕ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ಕೆ.ಎಸ್.ಕಟಗಿ, ಶಿಕ್ಷಕರು ಸಿಂಚನಾ ಕಟಗಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!