![Forest Department J. 24 and Feb. Open auction for clearance of various trees on 5th](https://independentsangramnews.com/wp-content/uploads/2025/01/WhatsApp-Image-2024-08-29-at-1.57.34-PM-scaled-1.jpeg)
ಧಾರವಾಡ ಜ.23 : ಧಾರವಾಡ ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಛೇರಿ ಆವರಣದಲ್ಲಿ ಅಪಾಯಕಾರಿ ಸ್ಧಿತಿಯಲ್ಲಿ 13 ಮರಗಳು ಮತ್ತು 30 ಟೊಂಗೆಗಳನ್ನು ತೆರವುಗೊಳಿಸಲು ಧಾರವಾಡ ವಲಯ ಅರಣ್ಯ ಅಧಿಕಾರಿ ಕಛೇರಿಯಲ್ಲಿ ಜನವರಿ 24, 2025 ಮತ್ತು ಫೆಬ್ರುವರಿ 5, 2025 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು.
ಮರ ಸಂರಕ್ಷಣಾ ಕಾಯ್ದೆ 1976 ರ ಸೆಕ್ಷನ್ 8 (3) (VII) ರ ಸೆಕ್ಷನ್‍ಗಳಲ್ಲಿ ಅಗತ್ಯ ಪಡಿಸಿರುವಂತೆ ಈ ಬಗ್ಗೆ ತಕರಾರು ಸಲ್ಲಿಸಬಯಸುವವರು ತಮ್ಮ ತಕರಾರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧಾರವಾಡ ಉಪ ವಿಭಾಗ, ಧಾರವಾಡ ಹಾಗೂ ಧಾರವಾಡ ಕೆ.ಸಿ.ಪಾರ್ಕ ಎದುರು ಅರಣ್ಯ ಸಂಕೀರ್ಣದಲ್ಲಿರುವ ಮರ ಅಧಿಕಾರಿಯವರಿಗೆ ಲಿಖಿತ ರೂಪದಲ್ಲಿ ಜನವರಿ 23, 2025 ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.