ಬೆಂಗಳೂರು 13 :– ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಸುಪ್ರೀಂಕೋರ್ಟ್‌ನಿಂದ ಜಾಮೀನು ರದ್ದು ಹಿನ್ನಲೆಯಲ್ಲಿ ವಿನಯ್​​ ಕುಲಕರ್ಣಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಬಿಜೆಪಿ ಮುಖಂಡ ಯೋಗೀಶ್‌ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಮಂಜೂರು ಮಾಡಲಾಗಿದ್ದ ಜಾಮೀನನ್ನು ಇತ್ತೀಚಿಗೆ ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಅಲ್ಲದೆ, ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಕುಲಕರ್ಣಿಗೆ ಆದೇಶ ನೀಡಿತ್ತು.

ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಕ್ಕೆ ವಿನಯ್​​ ಕುಲಕರ್ಣಿ ಹಾಜರಾಗಿದ್ದು, ನ್ಯಾಯಾಲಯ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ