ಗೃಹ ಲಕ್ಷ್ಮಿ ಹಣದಲ್ಲಿ ಬೋರವೇಲ್ ಹಾಕಿಸಿಕೊಂಡ ಅತ್ತೆ ಸೊಸೆ

ಗದಗ (ಗಜೇಂದ್ರಗಡ): ಗದಗ ಜಿಲ್ಲೆಯ ಗಜೇಂದ್ರಗಢ ಪಟ್ಟಣದ ಅತ್ತೆ, ಸೊಸೆ ಇಬ್ಬರೂ ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು “ಗೃಹಲಕ್ಷ್ಮಿ ಯೋಜನೆ” ನೆರವಿನ ಹಣ ಸದ್ಬಳಕೆ ಮಾಡಿಕೊಂಡಿದ್ದಾರೆ.

ಗಜೇಂದ್ರಗಡದ ಮಾಲ್ದಾರ್ ಕುಟುಂಬದ ಅತ್ತೆ ಮಾಬುಬೀ ಮತ್ತು ಸೊಸೆ ರೋಷನ್ ಬೇಗಂ ಇವರಿಬ್ಬರೂ ಸೇರಿ ಗೃಹಲಕ್ಷ್ಮಿ ಯೋಜನೆಯ 44,000 ರೂಪಾಯಿ ಹಣವನ್ನು ತಮ್ಮ 3 ಎಕರೆ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಬಳಕೆಮಾಡಿಕೊಂಡಿದ್ದಾರೆ. ಕೊಳವೆ ಬಾವಿ ಕೊರೆಸಲು 60 ಸಾವಿರ ರೂಪಾಯಿ ಖರ್ಚಾಗಿದ್ದು, ಉಳಿದ ಹಣವನ್ನು ಅವರ ಪುತ್ರ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಅನುಕೂಲವಾಗಿರುವ ಬಗ್ಗೆ ಅತ್ತೆ, ಸೊಸೆ ತಮ್ಮ ಸಂತಸವನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲಾದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಅದೇ ಹಣದಿಂದ ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ.

ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ.” ಎಂದು ಸಿಎಂ ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • Related Posts

    ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ

    ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ  ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…

    ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷರರ ಹುದ್ದೆಗೆ ಅರ್ಜಿ ಆಹ್ವಾನ

    ಧಾರವಾಡ ಡಿ.೨೧ :  2024-25 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ…

    RSS
    Follow by Email
    Telegram
    WhatsApp
    URL has been copied successfully!