ಧಾರವಾಡ 18 : ನಗರದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ವಾರ್ಡನ್ ಅರವಿಂದ ಜಾಧವ್ ಎಂಬುವವರು ಕಿರುಕುಳ ನೀಡುತ್ತಿದ್ದಾರೆ . ಅಲ್ಲದೇ ಸರ್ಕಾರದಿಂದ ಬಂದ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಅನೇಕ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಾರ್ಡನ್ ಅರವಿಂದ ಜಾಧವ್ ಅವರು ತಮಗೆ ಬೇಕಾದ ಕೆಲವೊಂದಿಷ್ಟು ವಿದ್ಯಾರ್ಥಿಗಳನ್ನು ದುಡ್ಡು ಪಡೆದು ಹಾಸ್ಟೆಲ್‌ನಲ್ಲಿ ಇಟ್ಟುಕೊಂಡಿದ್ದಾರೆ . ಹಾಸ್ಟೆಲ್‌ಗೆ ವಿದ್ಯಾರ್ಥಿಗಳಿಗಾಗಿ ಬರುವ ಸಾಬೂನು ಕಿಟ್ , ಪಲ್ಲಂಗ , ಬೆಡ್ , ಲಾಕರ್‌ಗಳನ್ನು ಸರ್ಕಾರದಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೀಡದೇ ವಿದ್ಯಾರ್ಥಿಗಳನ್ನು ಸೌಲಭ್ಯ ವಂಚಿತರನ್ನಾಗಿ ಮಾಡುತ್ತಿದ್ದಾರೆ . ತಮಗೆ ದುಡ್ಡು ಕೊಟ್ಟು ಹಾಸ್ಟೆಲ್‌ಗೆ ಬಂದ ವಿದ್ಯಾರ್ಥಿಗಳಿಗೆ ಮಾತ್ರ ಎಲ್ಲ ಸೌಲಭ್ಯ ನೀಡುತ್ತಿದ್ದು , ಇದರಿಂದ ಇನ್ನುಳಿದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಇದನ್ನು ಪ್ರಶ್ನೆ ಮಾಡಿದರೆ ವಾರ್ಡನ್ ಜಾಧವ್ ಅವರು ಸರಿಯಾಗಿ ಸ್ಪಂದಿಸುವುದಿಲ್ಲ . ವಿದ್ಯಾರ್ಥಿಗಳಿಗೆ ಕಿರುಕುಳ ಕೊಡುತ್ತಾರೆ ಹಾಗೂ ಅಸಭ್ಯವಾಗಿ ವರ್ತನೆ ಮಾಡುತ್ತಾರೆ . ಊಟದಲ್ಲೂ ಕೂಡ ಕಲಬೆರಕೆ ಮಾಡುತ್ತಾರೆ . ಸ್ವಚ್ಛತೆ ಕಾಪಾಡುವುದಿಲ್ಲ . ಅನಧಿಕೃತ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲಿ ಇಟ್ಟುಕೊಂಡು ಅಧಿಕೃತ ವಿದ್ಯಾರ್ಥಿಗಳಿಗೆ ತೊಂದರೆ ಕೊಡುತ್ತಿದ್ದಾರೆ . ಆದ್ದರಿಂದ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಜರುಗಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ವಸತಿ ನಿಲಯದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…