![Helpline set up in District Collector's Office; Ramesh Bagali, Deputy Director of Dharwad District Cooperative Societies appointed as Superintendent Officer.](https://independentsangramnews.com/wp-content/uploads/2025/01/WhatsApp-Image-2025-01-31-at-1.36.03-AM.jpeg)
ಧಾರವಾಡ ಜ.31: ಕರ್ನಾಟಕ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯ ಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನೊಂದವರು ದೂರವಾಣಿ ಸಂಖ್ಯೆ 0836-2445508 ಅಥವಾ ಟೋಲ ಪ್ರೀ ನಂ: 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೈಕ್ರೋಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರಗಳಲ್ಲಿ ಕರೆಗಳನ್ನು ಸ್ವೀಕರಿಸಲು ವಾರದ ಏಳು ದಿನಗಳಲ್ಲಿ ಹಗಲು ರಾತ್ರಿ ಪಾಳೆಯಲ್ಲಿ (ಮೂರು ಶಿಫ್ಟ್‍ನಲ್ಲಿ) ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ.
ಸಿಬ್ಬಂದಿಯವರು ನಿಗದಿತ ಸಮಯದಲ್ಲಿ ಸಹಾಯವಾಣಿ ಕೇಂದ್ರದಲ್ಲಿ ಹಾಜರಿದ್ದು, ದೂರವಾಣಿಯ ಮೂಲಕ ಸ್ವೀಕರಿಸುವ ಎಲ್ಲ ದೂರು ಮತ್ತು ಮಾಹಿತಿಗಳನ್ನು ಕಾರ್ಯಾಲಯದಲ್ಲಿ ನಿರ್ವಹಣೆ ಮಾಡಿದ ವಹಿಯಲ್ಲಿ ದಾಖಲಿಸಿ, ದೂರಿನ ಸಮಸ್ಯೆ ಅಂಶಗಳ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾರರಿಗೆ ಮತ್ತು ಪೆÇಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡುವರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಈ ಸಹಾಯವಾಣಿ ಕೇಂದ್ರ ಮೇಲುಸ್ತುವಾರಿ ಅಧಿಕಾರಿಯನ್ನಾಗಿ ಧಾರವಾಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ ಬಗಲಿ (ದೂರವಾಣಿ ಸಂಖ್ಯೆ: 9148431516) ಅವರನ್ನು ನೇಮಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.