ಹ್ಯುಮ್ಯಾನಿಟಿ ಫೌಂಡೇಶನ್ ಹಾಗೂ ಎಂ.ಐ.ಟಿ ಮಂಜುನಾಥ ಟೆಕ್ನಾಲಜಿ ಸಹಯೋಗದಲ್ಲಿ ಬೃಹತ್ ಉದ್ಯೋಗಳ ಮೇಳ

ಅಂಬೇಡ್ಕರ್ ಅವರ ಆದರ್ಶಗಳು ಪ್ರತಿಯೊಬ್ಬರಿಗೆ ಸ್ಪೂರ್ತಿಯಾಗಲಿ: ಮಂಜುನಾಥ ಭೋವಿ

ಧಾರವಾಡ: ಹ್ಯುಮ್ಯಾನಿಟಿ ಫೌಂಡೇಶನ್ ಹಾಗೂ ಎಂ.ಐ.ಟಿ ಮಂಜುನಾಥ ಟೆಕ್ನಾಲಜಿ ಸಹಯೋಗದಲ್ಲಿ ಹುಬ್ಬಳ್ಳಿ, ಧಾರವಾಡ ಮತ್ತು ಬೆಂಗಳೂರಿನ ಪ್ರತಿಷಿತ ಉದ್ಯೋಗ ಸಮೂಹ ಬಿವಿಜಿ ಸಂಸ್ಥೆಯ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಉದ್ಯೋಗ ಮೇಳವನ್ನು ಹುಬ್ಬಳ್ಳಿ-ಧಾರವಾಡ ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮಂಜುನಾಥ ಭೋವಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರದ ಎದುರಿಗೆ ಕ್ಯಾಂಡಲ್ ಬೆಳಗಿಸುವುದರ ಮೂಲಕ ಉದ್ಘಾಟಿಸಿ ನಂತರ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ನಿಮಿತ್ಯ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ಡಾ.ಬಿ.ಆರ್.ಅಂಬೇಡ್ಕರ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಶೋಷಿತ ಜನಾಂಗದ, ಮಹಿಳೆಯರ ಸಬಲೀಕರಣಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟು, ಸಾಮಾಜಿಕ ನ್ಯಾಯ ದೊರಕಿಸಿ ಕೊಟ್ಟ ಮಹಾನ್ ಚೇತನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು ಅಂತಾ ಹೇಳಿದರು.

ಭಾರತ ಕಂಡ ಮಹಾನ್‌ ವ್ಯಕ್ತಿ ಡಾ.ಬಿ.ಆರ್‌.ಅಂಬೇಡ್ಕರ್‌ ಯುವ ಸಮುದಾಯಕ್ಕೆ ತನ್ನ ಚಿಂತನೆಗಳಿಂದಲೇ ಸ್ಫೂರ್ತಿ ಹಾಗೂ ಆದರ್ಶ ವ್ಯಕ್ತಿಯೆನಿಸಿಕೊಂಡಿದ್ದಾರೆ. ಸಮಾಜ ಸುಧಾರಕರಾಗಿದ್ದು, ದಲಿತ ಬೌದ್ಧ ಚಳುವಳಿಯನ್ನು ಮುನ್ನಡೆಸುವ ಮೂಲಕ ಪ್ರೇರಣೆಯಾದ ವ್ಯಕ್ತಿಯಾಗಿದ್ದಾರೆ. ಅದಲ್ಲದೇ, ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರು ದಲಿತ ಕುಟುಂದಲ್ಲಿ ಜನಿಸಿದ್ದರಿಂದ ಅಸ್ಪೃಶ್ಯತೆ ನೋವು ಮಾತ್ರ ಇವರನ್ನು ಬಿಡಲಿಲ್ಲ. ಹೀಗಾಗಿ ಅಂಬೇಡ್ಕರ್ ಅವರು ಮಹಿಳೆಯರು ಹಕ್ಕುಗಳು, ಶೋಷಿತ ವರ್ಗಗಳ ಹಕ್ಕಿಗಾಗಿ ಹೋರಾಡಿದ ಮಹಾನ್ ವ್ಯಕ್ತಿ ಅಂತಾ ಹೇಳಿದರು.

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್ ಓಡಿಸಲು ಚಾಲಕರು ಬೇಕಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಸಂಬಳ, ಪಿಎಫ್, ಇನ್ಸೂರೆನ್ಸ್ ಬೋನ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಹೆವಿ ವೆಹಿಕಲ್ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಆಸಕ್ತರು ಸಂಪರ್ಕಿಸಬಹುದು ಎಂದರು.

ಈ ಸಂದರ್ಭದಲ್ಲಿ ಹ್ಯುಮ್ಯಾನಿಟಿ ಫೌಂಡೇಶನ್ ಅಧ್ಯಕ್ಷ ಸ್ವಾತಿ ಮಳಗಿ, ಶ್ರೀನಿವಾಸ ಉಣಕಲ್, ಹಿರಿಯ ಪತ್ರಕರ್ತರಾದ ಬಸವರಾಜ ಆನೆಗುಂದಿ, ಬಸವರಾಜ ಹನಸಿ ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!