ಮಕರ ಸಂಕ್ರಾತಿಯ ನಿಮಿತ್ತ ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

ಬೈಲಹೊಂಗಲ ಡಿ.೧೮ : ಮಣೂರ ಪ್ರಕಾಶನ ಕಲಬುರಗಿ ಇವರ ವತಿಯಿಂದ ಮಕರ ಸಂಕ್ರಾಂತಿ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ.

ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ, ವೀರರಾಣಿ ಕಿತ್ತೂರು‌ ಚನ್ನಮ್ಮ, ಸ್ವಾತಂತ್ರ್ಯ ಹೋರಾಟಗಾರರು, ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು ಆಹ್ವಾನಿಸಲಾಗಿದೆ.

ಕವನವು 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿಟಿಪಿ ಮಾಡಿಸಿರಬೇಕು. ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಜನವರಿ 5ರ ಒಳಗಾಗಿ ಶ್ರೀ ಮೋಹನ ಬಸನಗೌಡ ಪಾಟೀಲ , ಮಾಜಿ ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, “ಬಸವ ನಿವಾಸ”, ಚನ್ನಮ್ಮನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ. ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಮಣೂರ ಪ್ರಕಾಶನದ ಮುಖ್ಯಸ್ಥರಾದ ಡಾ. ಫಾರೂಕ್ ಅಹಮ್ಮದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!