
ಧಾರವಾಡ : ಕರ್ನಾಟಕ ಬಾಲವಿಕಾಸ ಅಕಾಡೆಮಿ ಹಾಗೂ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಜನವರಿ 16, 2025 ರಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಮಟ್ಟದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ ಕೇಂದ್ರ ಕಚೇರಿಯ ಸಮುದಾಯ ಭವನ (ಆಡಿಟೋರಿಯಂ)ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.