ಧಾರವಾಡ : ಸತತ ಮೂರು ದಶಕಗಳಿಂದ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಡಾ. ಲಿಂಗರಾಜ ಅಂಗಡಿ ಇತ್ತೀಚಿಗೆ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ಡಾ. ಲಿಂಗರಾಜ ಅಂಗಡಿರವರು ಕರ್ನಾಟಕ ವಿಶ್ವವಿದ್ಯಾಲಯ ಸಿಂಡಿಕೇಟ್ ಸೆನೆಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಕೂಡ ಕಾರ್ಯವನ್ನು ನಿರ್ವಹಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಕಾಲೇಜ್ ಶಿಕ್ಷಕರ ಸಂಘದ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಹಾಗೂ ಕಾಲೇಜು ಶಿಕ್ಷಕರ ಸಂಘದ ಒಕ್ಕೂಟದ ಅಧ್ಯಕ್ಷರಾಗಿ ಕೂಡ ಕೆಲಸ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ವಿಧಾನ ಪರಿಷತ್ ಸದಸ್ಯ ಎಫ್.ಎಚ್ ಜಕ್ಕಪ್ಪನವರ, ಶಾಸಕ ಎಂ.ಎಚ್.ಕೋನರೆಡ್ಡಿ, ಪ್ರೊ. ಐ ಜಿ ಸನದಿ,ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸದಾನಂದ ಡಂಗನವರ, ಚಂದ್ರಶೇಖರ್ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.





