
ಉದ್ಯೋಗ ಕ್ಷೇಮಕ್ಕೆ ಸಂಬಂಧಿಸಿದ ಹಲವು ವಿಷಯ ಚರ್ಚೆ
ಬೆಂಗಳೂರು : ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ಕೈಗಾರಿಕೆಗಳ ಉನ್ನತ ಅಧಿಕಾರಿಗಳು, ಮಾನವ ಸಂಪನ್ಮೂಲ ಹಾಗೂ ಉದ್ಯೋಗದಾತರೊಡನೆ ಉನ್ನತಮಟ್ಟದ ಸಭೆ ನಡೆಸಿದರು.
ಕಾರ್ಮಿಕರ ಉದ್ಯೋಗ ಮತ್ತು ಕ್ಷೇಮಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಿದರು.
ಸಭೆಯಲ್ಲಿ ಹಾಜರಿದ್ದವರು, ಕಾರ್ಮಿಕರ ಕ್ಷೇಮಕ್ಕೆ ಸಂಬಂಧಿಸಿದ ಹಲವು ಸಲಹೆಗಳನ್ನು ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕಾರ್ಮಿಕರ ಕಲ್ಯಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಸಲಹೆಗಳಿಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು.
ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಸಂಸ್ಥೆಗಳ ನಿರ್ದೇಶಕರಾದ ಶ್ರೀ ಶ್ರೀನಿವಾಸ್ ಪಾಲ್ಗೊಂಡಿದ್ದರು.