ಧಾರವಾಡ : ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಆಸಕ್ತರು ಅರ್ಜಿ ಸಲ್ಲಿಸಲು ಜನವರಿ 31, 2025 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2442183 ಗೆ ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.