
ಧಾರವಾಡ 14 : ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ನಿಮಿತ್ತ ಧಾರವಾಡದ ಜುಬ್ಲಿ ವೃತ್ತದ ಬಳಿ ಇರುವ ಸಂವಿಧಾನ ಶಿಲ್ಪಿ, ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಅಧಿಕಾರಿಗಳು, ಜನಪ್ರತಿನಿಧಿಗಳು ಮಾಲಾರ್ಪಣೆ ಮಾಡಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ನೇರವೆರಿಸಲಾಯಿತು ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಸಚಿವ ಸಂತೋಷ್ ಲಾಡ್ ಡೋಳ್ಳು ಬಾರಿಸುವದರೊಂದಿಗೆ ಚಾಲನೆ ನೀಡಿದರು.