“ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮ”

ಕರ್ನಾಟಕ ಪ್ರೌಢಶಾಲೆಯಲ್ಲಿ “ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಧಾರವಾಡ ಜಿಲ್ಲೆಯ ಗೌರವಾನ್ವಿತ ಜಿಲ್ಲಾಧಿಕಾರಿಗಳಾದಂತಹ ದಿವ್ಯ ಪ್ರಭು ಅವರು ಉದ್ಘಾಟಕರಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, 10ನೇ ವರ್ಗದ ಮಕ್ಕಳನ್ನು ಉದ್ದೇಶಿಸಿ ಸ್ಪೂರ್ತಿದಾಯಕ ಮಾತುಗಳನ್ನು ಆಡಿದರು.

ವಿದ್ಯಾರ್ಥಿಗಳು ಸಿನಿಮಾ, ಮೊಬೈಲ್, ಪಾರ್ಕ್, ಮುಂತಾದ ಸಂಗತಿಗಳನ್ನು ಬದಿಗೊತ್ತಿ ,ಕಷ್ಟಪಡದೇ ಇಷ್ಟಪಟ್ಟು ಅಭ್ಯಾಸ ಮಾಡಬೇಕು. ಹಾಗೆಯೇ ಶರೀರವನ್ನು ಗಟ್ಟಿಮುಟ್ಟಾಗಿ ಇಟ್ಟುಕೊಳ್ಳಬೇಕು. “ಶರೀರ ಮಾಧ್ಂ ಖಲು ಧರ್ಮ ಸಾಧನಂ” ಎಂಬಂತೆ ಆರೋಗ್ಯವಂತರಾಗಿ, ದುಶ್ಚಟಗಳಿಂದ ದೂರವಿದ್ದು, ಶ್ರದ್ಧೆಯಿಂದ ಅಧ್ಯಯನ ಮಾಡಿದರೆ, ಯಶಸ್ಸು ನಿಮ್ಮನ್ನು ಬೆನ್ನತ್ತಿ ಬರುತ್ತದೆ. ಪ್ರತಿದಿನ ಹೆಚ್ಚು ಸಮಯವನ್ನು ಅಧ್ಯಯನದಲ್ಲಿ ಕಳೆಯಬೇಕು.

ಧಾರವಾಡ ಜಿಲ್ಲೆ ವಿದ್ಯಾ ಕಾಶಿಯಾಗಿದ್ದು, 10ನೇ ವರ್ಗದ ಫಲಿತಾಂಶವು ನೂರಕ್ಕೆ ನೂರರಷ್ಟು ಆಗುವಂತೆ ಎಲ್ಲಾ ಮಕ್ಕಳು ಆಸಕ್ತಿಯಿಂದ ಅಧ್ಯಯನ ಮಾಡಬೇಕು ಹಾಗೂ ಗುರುಗಳು ಹೇಳಿದ ಪಾಠಗಳನ್ನು ಆ ದಿನವೇ ಮನನ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಯಶಸ್ಸು ಕಟ್ಟಿಟ್ಟ ಬುತ್ತಿ. ಸತತ ಪ್ರಯತ್ನದಿಂದ ಅಧ್ಯಯನದಿಂದ ಏನನ್ನಾದರೂ ಸಾಧಿಸಲು ಸಾಧ್ಯ.

ಆ ದಿಶೆಯಲ್ಲಿ ಎಲ್ಲಾ ಮಕ್ಕಳು ನಿಮ್ಮ ಶಾಲೆಗೆ, ನಿಮ್ಮ ಕುಟುಂಬಕ್ಕೆ, ತಂದೆ ತಾಯಿಗೆ ,ಜಿಲ್ಲೆಗೆ ,ರಾಜ್ಯಕ್ಕೆ ಒಳ್ಳೆಯ ಹೆಸರು ತರಬೇಕು. ಅದರಂತೆಯೇ ಉತ್ತಮ ಪ್ರಜೆಗಳಾಗಿ ಬಾಳಬೇಕು. ಅಂತ ಸ್ಪೂರ್ತಿದಾಯಕ ಮಾತುಗಳನ್ನು ಆಡಿದರು.

ಅಧ್ಯಕ್ಷತೆಯನ್ನು ಕರ್ನಾಟಕ ಪ್ರೌಢಶಾಲೆಯ ಆಡಳಿತ ಅಧಿಕಾರಿಗಳಾದ  ಜಿ ಆರ್ ಭಟ್ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಇಂತಹ ಜಿಲ್ಲಾಧಿಕಾರಿಗಳನ್ನು ರೋಲ್ ಮಾಡೆಲ್ ಆಗಿ ಇಟ್ಟುಕೊಂಡು, ಅವರಂತೆ ನೀವು ಸಹ ಸಾಧಿಸಲು ಪ್ರಯತ್ನಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಎಸ್ ಎಸ್ ಕೆಳದಿಮಠ, ಧಾರವಾಡ ಶಹರ ಕ್ಷೇತ್ರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಸಿಂದಗಿ, ಕರ್ನಾಟಕ ಪ್ರೌಢಶಾಲೆಯ ಪ್ರಾಂಶುಪಾಲರಾದ ಎನ್ ಎನ್ ಸವಣೂರ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳು, ಸಮಸ್ತ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!