ಧಾರವಾಡ  : ಧಾರವಾಡದ ಎಸ್‌. ಡಿ. ಎಮ್. ಇಂಜಿನಿಯರಿಂಗ್ ಕಾಲೇಜಿನ ಕೃತಕ ಬುದ್ಧಿಮತ್ತೆ ವಿಭಾಗದ 6 ನೇ ಸೆಮಿಸ್ಟರ್ ವಿದ್ಯಾರ್ಥಿನಿ ಅನುಷಾ ಎ. ರಾವ್ ಪ್ರತಿಷ್ಠಿತ ‘ಟೆಕ್ನೋವೇಶನ್’ ಸ್ಫರ್ಧೆಯಲ್ಲಿ ಅಗ್ರ 25 ತಂಡಗಳಲ್ಲಿ ಸ್ಥಾನ ಗಳಿಸುವ ಮೂಲಕ ರಾಷ್ಟ್ರೀಯಮಟ್ಟದಲ್ಲಿ ಭಾಗವಹಿಸಿದ್ದಾರೆ. ಅಂತಿಮ ಸುತ್ತಿನಲ್ಲಿ ಅನುಷಾ ಅವರ ನಾವೀನ್ಯತೆ ಮತ್ತು ತಾಂತ್ರಿಕ ಕೌಶಲ್ಯಗಳು ಕ್ಲಿಷ್ಟ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳಲು ನೆರವಾಗುವ ತಂತ್ರಜ್ಞಾನ ಗಮನ ಸೆಳೆಯಿತು.

ಇಂಡಿಯಾ ಸೆಲ್ಯುಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ, ನವದೆಹಲಿ ಆಯೋಜಿಸಿದ್ದ ಟೆಕ್ನೋವೇಶನ್ ಸ್ಫರ್ಧೆಯು, ದೇಶದಾದ್ಯಂತದ ಯುವ ಇನ್ನೋವೇಟರ್ ಗಳಿಗೆ ರಾಷ್ಟ್ರೀಯ ವೇದಿಕೆಯನ್ನು ಒದಗಿಸಿತ್ತು. ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಜೀವಂಧರ ಕುಮಾರ್, ಪ್ರಾಂಶುಪಾಲರಾದ ಡಾ. ರಮೇಶ್ ಎಲ್. ಚಕ್ರಸಾಲಿ, ಎಐಎಂಎಲ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್.ಆರ್. ಬಿರಾದರ್ ಮತ್ತು ಎಲ್ಲಾ ಶಿಕ್ಷಕರು ಸಾಧನೆಗಾಗಿ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.