
ಧಾರವಾಡ 25 : ದೆಹಲಿಯ ಕರ್ತವ್ಯ ಪಥ ನಲ್ಲಿ ನಡೆಯಲಿರುವ 76ನೇ ಗಣರಾಜ್ಯೋತ್ಸವ ಪಥಸಂಚಲನದ ವೀಕ್ಷಣೆಗೆ ವಿಶೇಷ ಅತಿಥಿಯಾಗಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ರಾಷ್ಟ್ರೀಯ ಸೇವಾ ಯೋಜನಾ ಕೋಶದಿಂದ ವಿದ್ಯಾರ್ಥಿ ಕು.ಶಿವಯೋಗಿ ಹಾವೇರಿ ಆಯ್ಕೆಯಾಗಿರುತ್ತನೆಂದು ರಾಷ್ಟ್ರೀಯ ಸೇವಾ ಯೋಜನಾ ಕೋಶದ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಎಂ. ಬಿ. ದಳಪತಿ ರವರು ತಿಳಿಸಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ವಿಶೇಷ ಅತಿಥಿಯಾಗಿ ಇಂಡೊನೆಷ್ಯಾದ ಅಧ್ಯಕ್ಷರು ಮತ್ತು ಮಂತ್ರಿ ಮಂಡಲದ ಎಲ್ಲಾ ಸದಸ್ಯರುಗಳು, ಗಣ್ಯರು ಭಾಗಿಯಾಗಲಿದ್ದಾರೆ. ಪಥಸಂಚಲನಕ್ಕೆ ಆಯ್ಕೆಯಾದ ಈ ವಿದ್ಯಾರ್ಥಿಗೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಸಂಯೋಜನ ಅಧಿಕಾರಿಗಳು, ಅಭಿನಂದಿಸಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.