ಹುಬ್ಬಳ್ಳಿ : ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರೌಡಿಶೀಟರ್ ಗಳು, ಗುಂಪುಗಳು, ಎನ್ ಡಿ ಪಿ ಎಸ್ ಆರೋಪಿಗಳು, ಓಸಿ, ಜೂಜಾಟ ಆಡುವ ಆರೋಪಿಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಒಟ್ಟು ೧೮೦ ಜನರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ಎಚ್ಚರಿಕೆ ನೀಡಿ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಯಿತು. ಅಲ್ಲದೇ ಇವರ ಪೋಷಕರನ್ನೂ ಸಹ ಸ್ಥಳಕ್ಕೆ ಕರೆಯಿಸಿ ಸಹ ವರ್ತನೆ ಸುಧಾರಿಸಿಕೊಳ್ಳಲು ತಿಳಿಸಲಾಗಿದೆ.
ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ರವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.