ಬೆಂಗಳೂರು: ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ಪರಿವರ್ತಿಸುವಲ್ಲಿ ಹಾಗೂ ಲಕ್ಷಾಂತರ ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ ಅವರ ಪಾತ್ರ ಶ್ಲಾಘನೀಯ.
ರಾಜ್ಯದ ಅಭಿವೃದ್ಧಿಯಲ್ಲೂ ಅವರು ಮಹತ್ವದ ಪಾತ್ರ ವಹಿಸಿದ್ದರು. ಎಸ್.ಎಂ.ಕೃಷ್ಣ ಅವರು ಹಲವು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಇದ್ದವರು; ಒಬ್ಬ ಶ್ರೇಷ್ಠ ರಾಜಕಾರಣಿ ಎಂದು ವಿವರಿಸಿದ್ದಾರೆ.
ಕೇಂದ್ರ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು. ಅವರಿಗೆ ಬಿಜೆಪಿಯ ಕೇಂದ್ರ ಸರಕಾರವು ಪದ್ಮ ವಿಭೂಷಣ ಪ್ರಶಸ್ತಿಯನ್ನೂ ನೀಡಿತ್ತು ಎಂದು ತಿಳಿಸಿದ್ದಾರೆ.
ಮೃತ ಹಿರಿಯರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.