ಮಾಳಮಡ್ಡಿಯಲ್ಲಿ ಮೂರು ಅಂಗಡಿಗಳು ಸುಟ್ಟು ಕರಕಲು.

ಧಾರವಾಡ : ನಗರದ ಮಾಳಮಡ್ಡಿ ಬಡಾವಣೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಹಣ್ಣು ಅಂಗಡಿ ಸೇರಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದ ಈ ಅವಘಡದಲ್ಲಿ ಭಾರೀ ನಷ್ಟ ಸಂಭವಿಸಿದರೂ, ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಮಾಳಮಡ್ಡಿ ಬಡಾವಣೆಯ ವಾಣಿಜ್ಯ ಪ್ರದೇಶದಲ್ಲಿರುವ ಅಂಗಡಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ವೇ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಸ್ಥಳೀಯರು ವಾಯುವಿಹಾರಕ್ಕೆ ಬಂದವರು ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ತಕ್ಷಣವೇ ನೀರು ಹಾಗೂ ಇತರ ಲಭ್ಯವಿದ್ದ ಸಾಧನಗಳ ಸಹಾಯದಿಂದ ಬೆಂಕಿ ಆರಿಸಲು ಯತ್ನಿಸಿದ್ದಾರೆ.





