ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಧಾರವಾಡ ೧೪ : ಧಾರವಾಡ ಮೃತ್ಯುಂಜಯ ನಗರದ ಕೊಟ್ಟಣದ ಓಣಿಯ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವದ ಮೊದಲ ದಿನದ ಕಾರ್ಯಕ್ರಮ ಗುಗ್ಗಳ ಮಹೋತ್ಸವವು ಜರುಗಿತು.
ಮುಂಜಾನೆ ಒಂಭತ್ತು ಗಂಟೆಗೆ ಅಮ್ಮಿನಭಾವಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚರ‍್ಯ ಮಹಾಸ್ವಾಮಿಗಳು, ಸುಳ್ಳದ ಶ್ರೀಗಳಾದ ಶಿವಸಿದ್ಧರಾಮೇಶ್ವರ ಶಿವಾಚರ‍್ಯ ಮಹಾಸ್ವಾಮಿಗಳು ಹಾಗೂ ಹೂವಿನಹಡಗಲಿ ಶ್ರೀಗಳಾದ ಚನ್ನವೀರ ಮಹಾಸ್ವಾಮಿಗಳು ಚಾಲನೆ ನೀಡಿದರು.

ಗುತ್ತಲದ ಪ್ರಸಿದ್ಧ ಪುರವಂತರು ಓಡಪುಗಳನ್ನು ಹೇಳುತ್ತಾ ವಿವಿಧ ವಾದ್ಯ, ಮುತೈದೆಯರು ಆರತಿಗಳೊಂದಿಗೆ ಭಾಗವಹಿಸಿದರು.

ಗುಗ್ಗಳದ ಮೆರವಣಿಗೆಯು ದೇವಸ್ಥಾನದಿಂದ ಆರಂಭಗೊಂಡು ಸವದತ್ತಿ ರಸ್ತೆ, ತೊಟ್ಟಿಗೇರ ಓಣಿ, ಮೂರುಸಾವಿರ ಮಠ ರಸ್ತೆ, ಡಿಪೋ ರ‍್ಕಲ್ ಮುಖಂತರ, ಅರಿಗೇರಿ ಓಣಿ, ಬಣಗಾರ ಓಣಿ, ಮುರುಘಾಮಠಕ್ಕೆ ಬಂದು ಪೂಜೆ ಸಲ್ಲಿಸಿ, ನಂತರ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಆಗಮಿಸಿ, ನೂರಾರು ಭಕ್ತರು ಕೆಂಡ ಹಾಯುವದರ ಮುಖಾಂತರ ಗುಗ್ಗಳ ಸಂಪನ್ನಗೊಂಡಿತು. ತದನಂತರ ಸಾವಿರಾರು ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ವೀರಭದ್ರೇಶ್ವರ ದೇವಸ್ಥಾನದ ಅಧ್ಯಕ್ಷ ಅರವಿಂದ ಏಗನಗೌಡರ, ಮೃತ್ಯುಂಜಯ ಸಿದ್ನಾಳ, ದೀಪಕ ಇಂಡಿ, ಸಿದ್ದಪ್ಪ ಕರಡಿಗುಡ್ಡ, ಈಶ್ವರ ಮಾಲಗಾರ, ಮಹಾಂತೇಶ ಕುರಟ್ಟಿದೇಸಾಯಿ,ಸುರೇಶ ಅರಕೇರಿ,ಮಹಾಂತೇಶ ಗೊರವನಕೊಳ್ಳ, ಸೋಮಣ್ಣ ಗೋಡಿಕಟ್ಟಿ, ಶಿವಯೋಗಿ ಹಂಚಿನಾಳ, ಗುರುಸಿದ್ದಪ್ಪ ಭಾವಿಕಟ್ಟಿ, ಪ್ರಭು ಕಲ್ಲಾಪುರ ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು. ಮಹಾಪ್ರಸಾದ ವ್ಯವಸ್ಥೆಯ ಜವಾಬ್ದಾರಿಯನ್ನು ಮೃತ್ಯುಂಜಯ ಯುವಕ ಮಂಡಳದ ಸದಸ್ಯರು ವಹಿಸಿಕೊಂಡಿದ್ದರು.

  • Related Posts

    ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ

    ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ  ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…

    ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷರರ ಹುದ್ದೆಗೆ ಅರ್ಜಿ ಆಹ್ವಾನ

    ಧಾರವಾಡ ಡಿ.೨೧ :  2024-25 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ…

    RSS
    Follow by Email
    Telegram
    WhatsApp
    URL has been copied successfully!